ಭಟ್ಕಳ : ತಾಲೂಕಿನ ಮುಟ್ಟಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತಲಾಂದ ಗ್ರಾಮದ ಗುಡ್ಡ ಪ್ರದೇಶದಲ್ಲಿ ಹೆಣ್ಣು ಚಿರತೆಯ ಮೃತ ದೇಹ ಪತ್ತೆಯಾಗಿದೆ.
ಆಹಾರ ಹುಡುಕುತ್ತ ಕಾಡಿನಿಂದ ಗುಡ್ಡ ಪ್ರದೇಶಕ್ಕೆ ಬಂದ ಚಿರತೆಯೊಂದಿಗೆ ಬೇರೊಂದು ಪ್ರಾಣಿ ಕಾಳಗ ನಡೆಸಿದೆ. ನಂತರ ಆ ಪ್ರಾಣಿ ಚಿರತೆಯನ್ನು ಕಚ್ಚಿ ಸಾಯಿಸಿರಬಹುದೆಂದು ಶಂಕಿಸಲಾಗಿದೆ. ಚಿರತೆಯ ಮೃತ ದೇಹ ನೋಡಿದ ಅಲ್ಲಿನ ಸ್ಥಳೀಯರು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ.
ನಂತರ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ, ಮೃತ ದೇಹಕ್ಕೆ ಅಲ್ಲಿಯೇ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ ಎಸಿಎಫ್ ಬಾಲಚಂದ್ರ ಹೆಚ್ ಸಿ ಹಾಗೂ ಸಿಬ್ಬಂದಿ ಸ್ಥಳದಲ್ಲಿ ಉಪಸ್ಥಿತರಿದ್ದರು.
ಓದಿ: ಅವನೇನು ಮುಖ್ಯಮಂತ್ರಿಯೋ, ಪ್ರಧಾನಮಂತ್ರಿಯೋ.. ಹಿರಿಯ ನಟ ಮುಖ್ಯಮಂತ್ರಿ ಚಂದ್ರು ವಿರುದ್ಧ ಕಾಶಪ್ಪನವರ್ ಕಿಡಿ