ETV Bharat / state

ಗಂಗಾವಳಿ ನದಿಗೆ ಕಿಂಡಿ ಅಣೆಕಟ್ಟು ವಿರೋಧಿಸಿ ಪ್ರಧಾನಿಗೆ ತುಳಸಿ ಗೌಡ ಪತ್ರ - ಗಂಗಾವಳಿ ನದಿ ಕೊಳ್ಳ ಮತ್ತು ಕೃಷಿ ಭೂಮಿ ಸಂರಕ್ಷಣಾ ಸಮಿತಿ

ಸರ್ಕಾರ ಕಿಂಡಿ ಆಣೆಕಟ್ಟು ನಿರ್ಮಿಸಲು ಯೋಜನೆ ರೂಪಿಸುತ್ತಿದ್ದು, ಇದು ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿದೆ. ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ನೇತೃತ್ವದಲ್ಲಿ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮಸ್ಥರು ಈ ಯೋಜನೆ ವಿರೋಧಿಸಿ ಪ್ರಧಾನಿಗೆ ಮನವಿ ಸಲ್ಲಿಸಿದ್ದಾರೆ.

ಕಿಂಡಿ ಆಣೆಕಟ್ಟು ನಿರ್ಮಾಣ ಯೋಜನೆಗೆ ವಿರೋಧ
ಕಿಂಡಿ ಆಣೆಕಟ್ಟು ನಿರ್ಮಾಣ ಯೋಜನೆಗೆ ವಿರೋಧ
author img

By

Published : Feb 17, 2022, 8:40 AM IST

ಕಾರವಾರ: ಅಂಕೋಲಾ ತಾಲೂಕಿನ ಹೊನ್ನಳ್ಳಿ ಸಮೀಪ ಗಂಗಾವಳಿ ನದಿಗೆ ಕಿಂಡಿ ಅಣೆಕಟ್ಟು ನಿರ್ಮಾಣವನ್ನು ವೃಕ್ಷಮಾತೆ ಹಾಗೂ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ತೀವ್ರವಾಗಿ ವಿರೋಧಿಸಿದ್ದಾರೆ. ಈ ಕುರಿತು ಗಂಗಾವಳಿ ನದಿ ಕೊಳ್ಳ ಮತ್ತು ಕೃಷಿ ಭೂಮಿ ಸಂರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿ ಮೂಲಕ ಪ್ರಧಾನಮಂತ್ರಿಗೆ ಪತ್ರ ರವಾನಿಸಿದ್ದಾರೆ.

ಕರಾವಳಿ ಜಿಲ್ಲೆ ಉತ್ತರಕನ್ನಡದ ಜೀವನಾಡಿಗಳಲ್ಲಿ ಗಂಗಾವಳಿ ನದಿ ಕೂಡ ಒಂದು. ನದಿಗೆ ಹೊಂದಿಕೊಂಡೇ ಹತ್ತಾರು ಗ್ರಾಮಗಳಿದ್ದು ಕದ್ರಾ, ಕೊಡಸಳ್ಳಿ ಜಲಾಶಯ ಯೋಜನೆಯ ನಿರಾಶ್ರಿತರು ಸಹ ಇದೇ ನದಿ ತಟದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಅಲ್ಲದೇ, ನೂರಾರು ಕುಟುಂಬಗಳು ಕೃಷಿ, ತೋಟಗಾರಿಕೆ ಹಾಗೂ ಮೀನುಗಾರಿಕೆಯನ್ನು ನಡೆಸುತ್ತಾ ಬದುಕು ಕಟ್ಟಿಕೊಂಡಿದ್ದಾರೆ. ಇದೀಗ ಇದೇ ಗಂಗಾವಳಿ ನದಿಗೆ ಅಡ್ಡಲಾಗಿ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದಲ್ಲಿ ಕಿಂಡಿ ಅಣೆಕಟ್ಟನ್ನ ಕಟ್ಟಲು ಸರ್ಕಾರ ಯೋಜನೆ ರೂಪಿಸಿದ್ದು, ಇದರ ಅನುಷ್ಠಾನಕ್ಕೆ ಇದೀಗ ಈ ಭಾಗದ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕಿಂಡಿ ಆಣೆಕಟ್ಟು ನಿರ್ಮಾಣ ಯೋಜನೆಗೆ ವಿರೋಧ

ಕಳೆದ ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಸುರಿದ ಭಾರಿ ಪ್ರಮಾಣದ ಮಳೆಯಿಂದಾಗಿ ಜಿಲ್ಲೆಯ ನದಿಗಳು ಉಕ್ಕಿ ಹರಿದಿದ್ದು, ಗಂಗಾವಳಿ ನದಿಯಲ್ಲೂ ಸಹ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಪರಿಣಾಮ ನದಿ ಪಾತ್ರದ ಗ್ರಾಮಗಳ ಜನರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದ್ದು, ತಾವು ಬೆಳೆದ ಬೆಳೆ ಸೇರಿದಂತೆ ಹಲವರು ಮನೆಗಳನ್ನ ಸಹ ಕಳೆದುಕೊಳ್ಳುವಂತಾಗಿತ್ತು. ಗಂಗಾವಳಿ ನದಿ ನೀರನ್ನ ಕುಡಿಯಲು ಸಹ ಬಳಕೆ ಮಾಡುವುದರಿಂದ ನದಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟು ನಿರ್ಮಿಸಲು ಸರ್ಕಾರ ಮುಂದಾಗಿದೆ. ಆದ್ರೆ ನದಿ ಸರಾಗವಾಗಿ ಹರಿದುಹೋಗುವಾಗಲೇ ನೆರೆ ಪ್ರವಾಹ ಉಂಟಾಗಿದ್ದು, ಇದೀಗ ಚೆಕ್‌ಡ್ಯಾಂ ನಿರ್ಮಾಣವಾದಲ್ಲಿ ಈ ಭಾಗದ ಗ್ರಾಮಗಳು ಸಂಪೂರ್ಣ ಮುಳುಗಡೆಯಾಗಲಿವೆ. ಹೀಗಾಗಿ, ಯಾವುದೇ ಕಾರಣಕ್ಕೂ ಕಿಂಡಿ ಅಣೆಕಟ್ಟು ಯೋಜನೆ ಜಾರಿಯಾಗಬಾರದು ಅನ್ನೋದು ಗ್ರಾಮಸ್ಥರ ಬೇಡಿಕೆ.

ಗಂಗಾವಳಿ ನದಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟು ಕಟ್ಟುವ ಯೋಜನೆಯನ್ನ 2007ರಲ್ಲೇ ಪ್ರಸ್ತಾಪಿಸಿದ್ದು, ಕುಡಿಯುವ ನೀರು ಪೂರೈಸುವ ನಿಟ್ಟಿನಲ್ಲಿ ಯೋಜನೆಯನ್ನ ರೂಪಿಸಲಾಗಿತ್ತು. ಆದ್ರೆ ಕಿಂಡಿ ಅಣೆಕಟ್ಟು ನಿರ್ಮಾಣದಿಂದ ಸುತ್ತಲಿನ ಜನವಸತಿ ಪ್ರದೇಶ, ಕೃಷಿ ಭೂಮಿ ಮುಳುಗಡೆಯಾಗುವ ಕಾರಣದಿಂದ ಅಕ್ಕಪಕ್ಕದ ಗ್ರಾಮಗಳ ಜನರು ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದರು. ನದಿ ಪಾತ್ರದಲ್ಲಿ ಕದ್ರಾ, ಕೊಡಸಳ್ಳಿ ಜಲಾಶಯದ ನೂರಾರು ನಿರಾಶ್ರಿತರ ಕುಟುಂಬಗಳು ಜೀವನ ಸಾಗಿಸುತ್ತಿದ್ದು, ಈ ಯೋಜನೆ ಜಾರಿಯಿಂದ ಅವರು ಮತ್ತೆ ನಿರಾಶ್ರಿತರಾಗಲಿದ್ದಾರೆ. ಹೀಗಾಗಿ, ಕುಡಿಯುವ ನೀರು ಪೂರೈಕೆಗೆ ಇರುವ ಪರ್ಯಾಯ ಮಾರ್ಗವನ್ನು ಪರಿಶೀಲಿಸಬೇಕು ಎಂದು ಹೋರಾಟಗಾರರು ಒತ್ತಾಯಿಸಿದ್ದಾರೆ.

ಈ ಯೋಜನೆಗೆ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಸಹ ವಿರೋಧ ವ್ಯಕ್ತಪಡಿಸಿದ್ದು, ನೆರೆಯ ಸಂದರ್ಭದಲ್ಲಿ ಬೆಳೆ, ಮರ-ಗಿಡಗಳಿಗೆ ಹಾನಿಯಾಗಿದ್ದು ಯಾವುದೇ ಕಾರಣಕ್ಕೂ ಈ ಯೋಜನೆ ಬೇಡ. ಚೆಕ್‌ ಡ್ಯಾಂ ಬದಲು ಕುಡಿಯುವ ನೀರು ಪೂರೈಕೆಗೆ ಪರ್ಯಾಯ ಮಾರ್ಗ ರೂಪಿಸುವಂತೆ ಜಿಲ್ಲಾಧಿಕಾರಿ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.