ಶಿರಸಿ: ಕೋವಿಡ್-19 ತಡೆಗಟ್ಟುವ ಸಲುವಾಗಿ ಲಾಕ್ಡೌನ್ ಮಾಡಲಾಗಿದೆ. ಇದನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ನಾವೆಲ್ಲರೂ ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ದೇಶವಾಸಿಗಳ ಸುರಕ್ಷತೆ ದೃಷ್ಟಿಯಿಂದ ಲಾಕ್ಡೌನ್ ಜಾರಿಗೊಳಿಸಿದ್ದಾರೆ.
ಜಿಲ್ಲೆಯಲ್ಲಿಯೂ ಸಹ ಜನತೆಗೆ ಅಗತ್ಯ ವಸ್ತುಗಳನ್ನು ತಲುಪಿಸುವುದಕ್ಕೆ ಸರ್ಕಾರಿ ಅಧಿಕಾರಿಗಳು ಸಿದ್ಧರಾಗಿದ್ದಾರೆ. ಈ ಲಾಕ್ಡೌನ್ ಸಮಯದಲ್ಲಿ ಸಾರ್ವಜನಿಕರ ಸಹಕಾರ ಬಹಳ ದೊಡ್ಡದಿದೆ. ಅವರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.