ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಲಾಕ್‌ಡೌನ್ ನಿಯಮ ಮತ್ತೆ ಬದಲಾವಣೆಯಾಗಿದೆ. ಸೋಮವಾರದಿಂದ ಗುರುವಾರದವರೆಗೆ ಬೆಳಗ್ಗೆ 8 ರಿಂದ 12 ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿ ಇನ್ನುಳಿದ ಮೂರು ದಿನ ಸಂಪೂರ್ಣ ಬಂದ್ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಡಿಸಿ, ಲಾಕ್‌ಡೌನ್ ಅವಧಿಯಲ್ಲಿ ಅನಗತ್ಯ ವಾಹನ ಓಡಾಟಕ್ಕೆ ಅವಕಾಶ ಇಲ್ಲ.ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಂಟೇನ್ಮೆಂಟ್ ವಲಯಗಳನ್ನು ಗುರುತಿಸಲಾಗಿದ್ದು, ಯಾವುದೇ ರೀತಿಯ ಬದಲಾವಣೆಗಳಿಲ್ಲ. ಅದು ಸಂಪೂರ್ಣ ಬಂದ್ ಇರಲಿದ್ದು ,ಆಯಾ ಗ್ರಾಮ ಪಂಚಾಯಿತಿ ಮೂಲಕವೇ ಎಲ್ಲವನ್ನು ಪೂರೈಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನೂ ದಿನನಿತ್ಯ ಅಗತ್ಯ ವಸ್ತುಗಳು, ತರಕಾರಿ ಮತ್ತು ದಿನಸಿ ಮಾರಾಟಕ್ಕೆ ಕೋವಿಡ್ ಮಾರ್ಗಸೂಚಿಯ ಪಾಲನೆಯೊಂದಿಗೆ ಮನೆಬಾಗಿಲಿಗೆ ಕೊಂಡೊಯ್ದು ಮಾರಾಟ ಮಾಡುವ ವ್ಯವಸ್ಥೆ ಮುಂದುವರಿಯಲಿದೆ. ಎಲ್ಲಾ ಖಾಸಗಿ ವಾಹನಗಳ ಸಂಚಾರವನ್ನು (ವೈದ್ಯಕೀಯ ಸೇವೆ, ಅತಿ ತುರ್ತು ಸೇವೆಗಳನ್ನು ಹಾಗೂ ಸರ್ಕಾರಿ ನೌಕರರನ್ನು ಅಧಿಕೃತ ಗುರುತಿನ ಚೀಟಿ ಇದ್ದಲ್ಲಿ ಮಾತ್ರ ಹೊರತುಪಡಿಸಿ) ಸಂಪೂರ್ಣವಾಗಿ ನಿಷೇಧಿಸಿರುವುದಾಗಿ ಆದೇಶ ಹೊರಡಿಸಿದ್ದಾರೆ.
ಗೋಹತ್ಯೆ ನಿಷೇಧ ಕಾಯ್ದೆ: ಆಕ್ಷೇಪಣೆ ಸಲ್ಲಿಸದಿದ್ದರೆ ಕಾಯ್ದೆಗೆ ತಡೆ ನೀಡ ಬೇಕಾಗುತ್ತದೆ..ಹೈಕೋರ್ಟ್ ಎಚ್ಚರಿಕೆ