ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಆಲೂಗಡ್ಡೆ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ.
ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಗುಣವಂತೆ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಮಂಗಳೂರು ಕಡೆ ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಆಲೂಗಡ್ಡೆ ಮೂಟೆಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಬಳಿಕ ಸ್ಥಳೀಯರು ಸೇರಿ ಆಲೂಗಡ್ಡೆ ಮೂಟೆಗಳನ್ನು ಒಂದೆಡೆ ಸೇರಿಸಿ ಇಟ್ಟಿದ್ದಾರೆ.
ಈ ಸಂಬಂಧ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.