ಶಿರಸಿ: ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡದ ಶಿರಸಿ ತಾಲ್ಲೂಕಿನ ಉಂಚಳ್ಳಿಯಲ್ಲಿ ನಡೆದಿದೆ.
ಉಂಚಳ್ಳಿಯ ಸುಶೀಲಾ ಗಣಪತಿ ರಜಪೂತ್ (60) ಅಪಘಾತದಲ್ಲಿ ಮೃತಪಟ್ಟ ಮಹಿಳೆ. ಶುಕ್ರವಾರ ಸಂಜೆ ಬನವಾಸಿ-ಉಂಚಳ್ಳಿ ಮುಖ್ಯ ರಸ್ತೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಲಾರಿ ಚಾಲಕನೋರ್ವ ತನ್ನ ಅಜಾಗರೂಕತೆ ಹಾಗೂ ಅತಿ ವೇಗದ ಚಾಲನೆಯಿಂದ ಮಹಿಳೆಗೆ ಡಿಕ್ಕಿ ಹೊಡೆದಿದ್ದಾನೆ.
ಈ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.