ಕಾರವಾರ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಮಾಲು ಸಮೇತ ಬಂಧಿಸಿರುವ ಘಟನೆ ಕುಮಟಾ ತಾಲೂಕಿನ ಗೋಕರ್ಣದ ಬೇಲೆಹಿತ್ತಲ ಗ್ರಾಮದಲ್ಲಿ ನಡೆದಿದೆ.
ಹುಬ್ಬಳ್ಳಿಯ ನೇಕಾರ ನಗರದ ವಿನಾಯಕ ಪ್ರೇಮನಾಥ ಹಬೀಬ್ (25) ಬಂಧಿತ ಆರೋಪಿ. ಈತ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪಿ.ಎಸ್.ಐ ನವೀನ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, ಸುಮಾರು 4 ಕೆ.ಜಿ. ತೂಕದ 80 ಸಾವಿರ ರೂ. ಮೌಲ್ಯದ ಗಾಂಜಾ ಸಹಿತ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಕುರಿತು ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.