ಕಾರವಾರ: ಹಳಿಯ ಮೇಲೆ ನಡೆದು ಹೋಗುತ್ತಿದ್ದ ವ್ಯಕ್ತಿಗೆ ರೈಲು ಬಡಿದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕುಮಟಾ ತಾಲೂಕಿನ ಬರ್ಗಿ ಗ್ರಾಮದ ಬಳಿ ನಡೆದಿದೆ.
ಬರ್ಗಿಯ ವೆಂಕಟರಮಣ ಪಟಗಾರ (52) ಮೃತ ದುರ್ದೈವಿ. ರೈಲು ಬರುವುದನ್ನು ಗಮನಿಸದೆ ಹಳಿಯ ಮೇಲೆಯೇ ಇವರು ನಡೆಯುತ್ತಿದ್ದರು. ಈ ಸಂದರ್ಭದಲ್ಲಿ ಇವರಿಗೆ ರೈಲು ಹಾಯ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.