ETV Bharat / state

ಸಿದ್ದಾಪುರ: ಭಾರಿ ಮಳೆ, ಗಾಳಿಗೆ ಮನೆ ಕುಸಿದು ಬಿದ್ದು ವ್ಯಕ್ತಿ ಸಾವು - ವ್ಯಕ್ತಿ ಸಾವು

ಮನೆ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸಿದ್ದಾಪುರದಲ್ಲಿ ನಡೆದಿದೆ.

Man dead in house collapse
ಮನೆ ಕುಸಿದು ಬಿದ್ದು ವ್ಯಕ್ತಿ ಸಾವು
author img

By

Published : Sep 12, 2022, 10:19 AM IST

ಶಿರಸಿ: ಭಾರಿ ಗಾಳಿ, ಮಳೆಗೆ ಮನೆ ಕುಸಿದು ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸಿದ್ದಾಪುರ ತಾಲೂಕಿನ ಕ್ಯಾದಗಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಚಂದ್ರಶೇಖರ ನಾರಾಯಣ ಹಸ್ಲರ್ (23) ಮೃತ ದುರ್ದೈವಿ.

ಮನೆ ಬಿದ್ದ ತಕ್ಷಣ ಗಾಯಾಳು ಚಂದ್ರಶೇಖರ ಅವರನ್ನು ಶಿವಮೊಗ್ಗಕ್ಕೆ ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯುಲಾಗುತ್ತಿತ್ತು. ಈ ಸಂದರ್ಭ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ 2 ದಿನಗಳಿಂದ ಸಿದ್ದಾಪುರದಲ್ಲಿ ಜೋರು ಮಳೆ ಸುರಿಯುತ್ತಿದೆ. ಇದರಿಂದ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಕಂದಾಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಇದನ್ನೂ ಓದಿ: ಉತ್ತರಕನ್ನಡದಲ್ಲಿ ಭಾರಿ ಮಳೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಸಿದ ಭೂಮಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.