ಶಿರಸಿ: ಈ ವರ್ಷದ ಮೊದಲ ಮಂಗನ ಕಾಯಿಲೆ ಪ್ರಕರಣ ಸಿದ್ದಾಪುರದ ಕುಳಿಬೀಡಿನಲ್ಲಿ ಪತ್ತೆಯಾಗಿ ಆತಂಕ ಸೃಷ್ಟಿಸಿದೆ.
ಕುಳಿಬೀಡಿನ 51 ವರ್ಷದ ಮಹಿಳೆಯಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದ್ದು, ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಎರಡು ವರ್ಷಗಳಿಂದ ಸಿದ್ದಾಪುರ ತಾಲೂಕಿನಲ್ಲಿ ಮರಣ ಮೃದಂಗ ಬಾರಿಸುತ್ತಿರೋ ಮಂಗನ ಕಾಯಿಲೆ ಮತ್ತೆ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.