ETV Bharat / state

ಕಾರವಾರದಲ್ಲಿ ಮೆಗಾ ಲೋಕ ಅದಾಲತ್ : ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಇಲ್ಲಿದೆ ಅವಕಾಶ - ಮೆಗಾ ಲೋಕ ಅದಾಲತ್

ಲೋಕ ಅದಾಲತ್‌ನಲ್ಲಿ ಒಬ್ಬ ನ್ಯಾಯಾಧೀಶರು ಮತ್ತು ಒಬ್ಬ ವಕೀಲರು ಸೇರಿ ಪ್ರಕರಣಗಳ ವಿಚಾರಣೆ ನಡೆಸಿ ಅಂತಿಮ ತೀರ್ಪು ನೀಡುತ್ತಾರೆ. ಸಿವಿಲ್ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಹಣಕಾಸು, ಕಾರ್ಮಿಕ, ಅಕ್ರಮ ಮರಳು ಸಾಗಾಣಿಕೆ, ಮನೆ ಬಾಡಿಗೆ ವಿವಾದ, ಕೌಟುಂಬಿಕ ಕಲಹ, ಭೂಸ್ವಾಧೀನ ಪ್ರಕರಣಗಳ ವಿಚಾರಣೆ ನಡೆಸಲಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಟಿ.ಗೋವಿಂದಯ್ಯ ವಿವರಿಸಿದರು.

mega-lok-adalat-in-karwar
ಹಿರಿಯ ಸಿವಿಲ್ ನ್ಯಾಯಾಧೀಶ ಟಿ ಗೋವಿಂದಯ್ಯ
author img

By

Published : Mar 9, 2021, 3:35 PM IST

ಕಾರವಾರ: ನ್ಯಾಯಾಲಯಕ್ಕೆ ಕಕ್ಷಿದಾರರ ಅಲೆದಾಟ ತಪ್ಪಿಸಲು ಮಾರ್ಚ್ 27ರಂದು ಮೆಗಾ ಲೋಕ ಅದಾಲತ್‌ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಟಿ.ಗೋವಿಂದಯ್ಯ ತಿಳಿಸಿದ್ದಾರೆ.

ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಇಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಅದಾಲತ್‌ನಲ್ಲಿ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸಲಾಗುತ್ತದೆ. ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಕಕ್ಷಿದಾರರು ಅದಾಲತ್‌ನ ಸದುಪಯೋಗ ಪಡೆಯಬೇಕು ಎಂದು ಹೇಳಿದರು.

ಕಾರವಾರದಲ್ಲಿ ಮೆಗಾ ಲೋಕ ಅದಾಲತ್

ಲೋಕ ಅದಾಲತ್‌ನಲ್ಲಿ ಒಬ್ಬ ನ್ಯಾಯಾಧೀಶರು ಮತ್ತು ಒಬ್ಬ ವಕೀಲರು ಸೇರಿ ಪ್ರಕರಣಗಳ ವಿಚಾರಣೆ ನಡೆಸಿ ಅಂತಿಮ ತೀರ್ಪು ನೀಡುತ್ತಾರೆ. ಸಿವಿಲ್ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಹಣಕಾಸು, ಕಾರ್ಮಿಕ, ಅಕ್ರಮ ಮರಳು ಸಾಗಾಣಿಕೆ, ಮನೆ ಬಾಡಿಗೆ ವಿವಾದ, ಕೌಟುಂಬಿಕ ಕಲಹ, ಭೂಸ್ವಾಧೀನ ಪ್ರಕರಣಗಳ ವಿಚಾರಣೆ ನಡೆಸಲಾಗುತ್ತದೆ ಎಂದು ವಿವರಿಸಿದರು.

ಜಿಲ್ಲೆಯಲ್ಲಿ 34,502 ಪ್ರಕರಣಗಳ ವಿಚಾರಣೆ ಬಾಕಿಯಿದ್ದು, ಈ ಪೈಕಿ 18,497 ಕ್ರಿಮಿನಲ್ ಹಾಗೂ 16,005 ಸಿವಿಲ್ ಪ್ರಕರಗಳಿವೆ. ಇವುಗಳಲ್ಲಿ ಶೇ 20ರಷ್ಟು ರಾಜಿ ಆಗಬಹುದಾದ ಪ್ರಕರಣಗಳನ್ನು ಗುರುತಿಸಲಾಗಿದೆ. ಅದಾಲತ್‌ನಲ್ಲಿ ರಾಜಿಯಾದ ಪ್ರಕರಣಗಳ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ. ಅದಾಲತ್‌ನಲ್ಲಿ ನ್ಯಾಯ ವಿಳಂಬವಾಗದೆ ಶೀಘ್ರವಾಗಿ ದೊರೆಯುತ್ತದೆ ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.