ಶಿರಸಿ : ರಾಜ್ಯದ ಪ್ರತಿಷ್ಠಿತ ಅಪೆಕ್ಸ್ ಬ್ಯಾಂಕ್ ಉತ್ತರ ಕನ್ನಡ ಜಿಲ್ಲಾ ಪ್ರತಿನಿಧಿಯಾಗಿ ಕಾರ್ಮಿಕ ಮತ್ತು ಸಕ್ಕರೆ ಸಚಿವ ಹಾಗೂ ಕೆನರಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವರಾಮ ಹೆಬ್ಬಾರ್ ಆಯ್ಕೆಯಾಗಿದ್ದಾರೆ.
ಹೆಬ್ಬಾರ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೆಡಿಸಿಸಿ ಬ್ಯಾಂಕ್ನ ನೂತನ ಮಂಡಳಿಯ ಪ್ರಥಮ ಆಡಳಿತ ಮಂಡಳಿಯ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಯಿತು.
ಎಲ್ಲಾ ಸದಸ್ಯರು ಸರ್ವಾನುಮತದಿಂದ ಸಚಿವ ಹೆಬ್ಬಾರ್ ಅವರನ್ನು ಆಯ್ಕೆ ಮಾಡಿದರು. ಸತತ ಎರಡನೇ ಬಾರಿಗೆ ಸಚಿವರು ರಾಜ್ಯ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾದರು.