ETV Bharat / state

ಶಿರಸಿಯ ಕೆಡಿಸಿಸಿ ಬ್ಯಾಂಕ್​ ಅಧ್ಯಕ್ಷರಾಗಿ ಸಚಿವ ಹೆಬ್ಬಾರ್​ ಅವಿರೋಧ ಆಯ್ಕೆ - KDCC Bank

ಶಿರಸಿಯ ಕೆಡಿಸಿಸಿ ಬ್ಯಾಂಕ್​ಗೆ ಐದು ವರ್ಷದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕಾರ್ಮಿಕ ಮತ್ತು ಸಕ್ಕರೆ ಹಾಗೂ‌ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್​ ಆಯ್ಕೆಯಾಗಿದ್ದಾರೆ.

dsd
ಸಚಿವ ಹೆಬ್ಬಾರ್​ ಅವಿರೋಧ ಆಯ್ಕೆ
author img

By

Published : Nov 21, 2020, 12:22 PM IST

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ ಆಪರೇಟಿವ್ ಬ್ಯಾಂಕ್ ( ಕೆಡಿಸಿಸಿ ) ನೂತನ ಅಧ್ಯಕ್ಷರಾಗಿ ನಿರೀಕ್ಷೆಯಂತೆಯೇ ಕಾರ್ಮಿಕ ಮತ್ತು ಸಕ್ಕರೆ ಹಾಗೂ‌ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್​ ಹೆಬ್ಬಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಚಿವ ಹೆಬ್ಬಾರ್​ ಅವಿರೋಧ ಆಯ್ಕೆ

ಡಿಸಿಸಿ ಬ್ಯಾಂಕ್​ನ ಒಟ್ಟು 16 ನಿರ್ದೇಶಕರಲ್ಲಿ ಸಚಿವ ಶಿವರಾಮ್​ ಹೆಬ್ಬಾರ್ ಹಾಗೂ ಮೋಹನದಾಸ್​ ನಾಯಕ ಕ್ರಮವಾಗಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆಯ ಗಡುವು ಮುಗಿಯುವ ವೇಳೆಗೆ ಬೇರೆ ಯಾರೂ ಉಮೇದುವಾರಿಕೆ ಸಲ್ಲಿಸದ ಕಾರಣ ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಆಕೃತಿ ಬನ್ಸಾಲ್ ಘೋಷಿಸಿದರು.

ಸಚಿವ ಹೆಬ್ಬಾರ್ 5ನೇ ಬಾರಿಗೆ ಡಿಸಿಸಿ ನಿರ್ದೇಶಕರಾಗಿ ಆಯ್ಕೆಯಾಗಿದ್ದು, ಮೋಹನದಾಸ್​ ನಾಯಕ ಎರಡನೇ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ಹಿಡಿತದಲ್ಲಿದ್ದ ಡಿಸಿಸಿ ಬ್ಯಾಂಕ್ ಚುಕ್ಕಾಣಿ ಈ ಬಾರಿ ಬಿಜೆಪಿ ತೆಕ್ಕೆಗೆ ಬಿದ್ದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.