ETV Bharat / state

ಪರೇಶ್ ಮೇಸ್ತಾ ಸಾವು ಪ್ರಕರಣ ಮರು ತನಿಖೆ ಬಗ್ಗೆ ಸಿಎಂ ಭರವಸೆ: ಕೋಟಾ ಶ್ರೀನಿವಾಸ ಪೂಜಾರಿ - ಪರೇಶ್ ಮೇಸ್ತಾ ಸಾವಿನ ಪ್ರಕರಣದ ಮರು ತನಿಖೆ

ಕಮಲಾಕರ ಮೇಸ್ತಾ ಅವರು ಮುಖ್ಯಮಂತ್ರಿ ಭೇಟಿ ಮಾಡಿ ಈಗಿನ ಸಿಬಿಐ ತನಿಖೆ ಸಮರ್ಪಕವಾಗಿಲ್ಲ ಎಂದು ಮರು ತನಿಖೆಗೆ ಆಗ್ರಹಿಸಿದ್ದಾರೆ. ಪರೇಶ್ ಮೇಸ್ತಾ ಕುಟುಂಬದ ಪರವಾಗಿ ನಮ್ಮ ಸರ್ಕಾರ ಇದೆ. ಶೀಘ್ರದಲ್ಲೇ ಮೇಸ್ತಾ ಪ್ರಕರಣ ಮರು ತನಿಖೆಗೆ ನಡೆಸಲಾಗುವುದು- ಸಚಿವ ಕೋಟ ಶ್ರೀನಿವಾಸ ಪೂಜಾರಿ.

Honnavar Paresh Mesta Case
ಪರೇಶ್ ಮೇಸ್ತಾ ಸಾವು ಪ್ರಕರಣ ಮರು ತನಿಖೆಗೆ ಸಿಎಂಗೆ ಮನವಿ
author img

By

Published : Oct 22, 2022, 1:44 PM IST

ಕಾರವಾರ: ಹೊನ್ನಾವರದ ಪರೇಶ್ ಮೇಸ್ತಾ ಸಾವಿನ ಪ್ರಕರಣದ ಮರು ತನಿಖೆಗೆ ಅವರ ತಂದೆ ಕಮಲಾಕರ ಮೇಸ್ತಾ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಒತ್ತಾಯಿಸಿದ್ದಾರೆ. ಸಿಎಂ ಬೊಮ್ಮಾಯಿ ಮರು ತನಿಖೆ ನಡೆಸುವ ಬಗ್ಗೆ ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕೋಟಾ ಶ್ರೀನಿವಾಸ ಪೂಜಾರಿ ..

ಕಾರವಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರೇಶ್ ಮೆಸ್ತಾನ ಸಾವು ಮರು ಸಿಬಿಐ ತನಿಖೆಗೆ ಕಮಲಾಕರ್ ಮೇಸ್ತಾ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಕೂಡ ಸ್ಪಂದನೆ ನೀಡಿದ್ದು, ಮನವಿ ಪರಿಶೀಲಿಸಿ ಪುನರ್ ತನಿಖೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಪರೇಶ್​ ಮೇಸ್ತಾ ಕುಟುಂಬದ ಪರವಾಗಿ ನಮ್ಮ ಸರ್ಕಾರ ಇರುತ್ತದೆ. ಶೀಘ್ರದಲ್ಲೇ ಮೇಸ್ತಾ ಪ್ರಕರಣ ಮರು ತನಿಖೆಗೆ ನೀಡಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಇದನ್ನೂ ಓದಿ: ಪರೇಶ್ ಮೇಸ್ತ ಕೊಲೆ ಅಲ್ಲ, ಆಕಸ್ಮಿಕ ಸಾವು.. ಸಿಬಿಐ ವರದಿಗೆ ಪರೇಶ್ ತಂದೆ ಅಸಮಾಧಾನ

ಮರು ತನಿಖೆಗೆ ಸಿಎಂಗೆ ಮನವಿ: ಪರೇಶ್ ಮೇಸ್ತಾ ಸಾವಿನ ಕುರಿತು ಸಿಬಿಐ ಬಿ ರಿಪೋರ್ಟ್ ಸಲ್ಲಿಸಿದ ಹಿನ್ನೆಲೆ ಪರೇಶ್ ಮೇಸ್ತಾ ಅವರ ತಂದೆ ಕಮಲಾಕರ್ ಮೇಸ್ತಾ ಪುನರ್ ತನಿಖೆ ಮಾಡುವಂತೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಗುರುವಾರ ಮನವಿ ಸಲ್ಲಿಸಿದ್ದಾರೆ.

ನನ್ನ ಮಗ ಪರೇಶ್ ಮೆಸ್ತಾನ ಸಾವು ಅಸಹಜ ಸಾವಾಗಿದ್ದು, ಸಿಬಿಐ ಸಾಕ್ಷಾಧಾರಗಳು ಲಭ್ಯ ಆಗಿಲ್ಲ ಎಂಬ ಕಾರಣಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಇದರಿಂದ ನನಗೆ ನ್ಯಾಯ ವಂಚನೆ ಆಗಿದೆ. ನನ್ನ ಮಗ ಪರೇಶ್ ಮೇಸ್ತಾನ ಪ್ರಕರಣವನ್ನು ಸಿಬಿಐಗೆ ನೀಡುವಾಗ 4 ತಿಂಗಳ ಅವಧಿ ಮೀರಿದ್ದು, ಬಹುತೇಕ ಸಾಕ್ಷಾಧಾರಗಳು ನಾಶ ಮಾಡಲಾಗಿದೆ.

ಈ ಹಿನ್ನೆಲೆ ಮತ್ತಷ್ಟು ಆಳವಾದ ತನಿಖೆ ಮಾಡಬೇಕಾದ ಅವಶ್ಯಕತೆ ಇರುವುದರಿಂದ ಪುನರ್ ಸಿಬಿಐ ತನಿಖೆಗೆ ಆದೇಶ ನೀಡಬೇಕು ಎಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದಾರೆ. ಮನವಿ ಆಲಿಸಿದ ಮುಖ್ಯಮಂತ್ರಿ ತಂದೆಯಾಗಿ ನಿಮ್ಮ ಕಷ್ಟವನ್ನು ಅರ್ಥಮಾಡಿಕೊಳ್ಳುತ್ತೇನೆ. ಮನವಿಯನ್ನು ಪರಿಶೀಲಿಸಿ, ಪುನರ್ ತನಿಖೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ: ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸಿಎಂಗೆ ಮನವಿ ಸಲ್ಲಿಸಿದ ಪರೇಶ್​ ಮೇಸ್ತಾ ತಂದೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.