ETV Bharat / state

ಸಿದ್ದರಾಮಯ್ಯ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ : ಸಚಿವ ಶಿವರಾಮ್ ಹೆಬ್ಬಾರ್ - ಭಾರತ್ ಬಂದ್​ ಬಗ್ಗೆ ಶಿವರಾಮ್ ಹೆಬ್ಬಾರ್ ಪ್ರತಿಕ್ರಿಯೆ

ಭಾರತ್ ಬಂದ್​ನಿಂದ ಯಾವ ಸಾಧನೆಯೂ ಆಗಿಲ್ಲ. ಕಳೆದ ಒಂದು ವರ್ಷದಿಂದ ದೇಶ ಬಂದ್​ ಆಗಿಯೇ ಇದೆ. ರಾಜ್ಯದ ಹಾಗೂ ದೇಶದ ಜನ ಈ ಬಂದ್ ಅನ್ನು ಒಪ್ಪಿಕೊಂಡಿಲ್ಲ. ಪ್ರಬಲವಾಗಿ ವಿರೋಧಿಸಿದ್ದಾರೆ. ಕೆಲವರು ನೈತಿಕವಾಗಿ ಬೆಂಬಲವನ್ನಷ್ಟೇ ನೀಡಿದ್ದಾರೆ..

minister-shivaram-hebbar
ಕಾರ್ಮಿಕ‌ ಸಚಿವ ಶಿವರಾಮ್ ಹೆಬ್ಬಾರ್
author img

By

Published : Sep 27, 2021, 3:21 PM IST

ಕಾರವಾರ : ಬಿಜೆಪಿಯವರು ಹಿಟ್ಲರ್ ಸಂಸ್ಕೃತಿಯವರು ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಕಾರ್ಮಿಕ‌ ಸಚಿವ ಶಿವರಾಮ್ ಹೆಬ್ಬಾರ್ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಬೇಕೆಂಬ ಹುಮ್ಮಸ್ಸಿಗೆ ಡಿ ಕೆ ಶಿವಕುಮಾರ್ ಅಡ್ಡಿಯಾದ ಕಾರಣ ಅವರು ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದಿದ್ದಾರೆ ಹೆಬ್ಬಾರ್.

ಸಚಿವ ಶಿವರಾಮ್ ಹೆಬ್ಬಾರ್

ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಅವರು ಈ ಕುರಿತು ಮಾತನಾಡಿದರು. ಸಿದ್ದರಾಮಯ್ಯ ಅವರ ಹೇಳಿಕೆಗಳಿಂದ ಏನೂ ಆಗಲ್ಲ. ಅವರು ವಿಧಾನಸಭೆಯಲ್ಲೂ ಇದನ್ನೇ ಹೇಳಿದ್ದರು. ಅದಕ್ಕೆ ಮುಖ್ಯಮಂತ್ರಿಯವರೂ ಅಲ್ಲಿ ಸರಿಯಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಆದರೂ, ಅವರಿಗೆ ಸಮಾಧಾನವಾದಂತೆ ಕಾಣುತ್ತಿಲ್ಲ ಎಂದರು.

ಭಾರತ್ ಬಂದ್ ಕುರಿತು ಪ್ರತಿಕ್ರಿಯಿಸಿದ ಅವರು, ಬಂದ್ ಕರ್ನಾಟಕದಲ್ಲಿ ಯಶಸ್ವಿಯಾಗಿಲ್ಲ. ಅನೇಕ ಸ್ವಯಂಘೋಷಿತ ನಾಯಕರು ಬಂದ್‌ಗೆ ಕರೆಕೊಟ್ಟು ಸಂಪೂರ್ಣ ವಿಫಲತೆ ಕಂಡಿದ್ದಾರೆ ಎಂದರು.

ಭಾರತ್ ಬಂದ್​ನಿಂದ ಯಾವ ಸಾಧನೆಯೂ ಆಗಿಲ್ಲ. ಕಳೆದ ಒಂದು ವರ್ಷದಿಂದ ದೇಶ ಬಂದ್​ ಆಗಿಯೇ ಇದೆ. ಮತ್ತೆ ಬಂದ್ ಮಾಡುವುದರಿಂದ ಶಿಕ್ಷಣ, ವ್ಯಾಪಾರ-ಉದ್ಯಮದ ಮೇಲೆ ದುಷ್ಪರಿಣಾಮ ಬೀರುತ್ತದೆ.

ಹೀಗಾಗಿ, ರಾಜ್ಯದ ಹಾಗೂ ದೇಶದ ಜನ ಈ ಬಂದ್ ಅನ್ನು ಒಪ್ಪಿಕೊಂಡಿಲ್ಲ. ಪ್ರಬಲವಾಗಿ ವಿರೋಧಿಸಿದ್ದಾರೆ. ಕೆಲವರು ನೈತಿಕವಾಗಿ ಬೆಂಬಲವನ್ನಷ್ಟೇ ನೀಡಿದ್ದಾರೆ ಎಂದರು.

ಯಾವ ಉದ್ದೇಶಕ್ಕೆ ಭಾರತ್ ಬಂದ್ ಮಾಡಿದ್ದಾರೋ ಈ ಬಗ್ಗೆ ಸರ್ಕಾರ ವಿಧಾನಸಭೆ ಒಳಗೆ ಹಾಗೂ ಹೊರಗೆ ತನ್ನ ಪ್ರತಿಕ್ರಿಯೆ ನೀಡಿದೆ. ದೇಶದಲ್ಲಿ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ ನಿಶ್ಚಿತ ಕೆಲಸ ಮಾಡಲಿದೆ ಎಂದಿದ್ದಾರೆ.

ಓದಿ: ಭಾರತ್ ಬಂದ್​​ಗೆ ಮಂಗಳೂರಿನಲ್ಲಿ ಇಲ್ಲ ಬೆಂಬಲ: ಬಂದರು ಕಾರ್ಮಿಕರ ಸಾಂಕೇತಿಕ ಪ್ರತಿಭಟನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.