ಶಿರಸಿ : ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರದಲ್ಲಿ ಮೊದಲ ಬಾರಿಗೆ ಸಚಿವ ಶಿವರಾಮ ಹೆಬ್ಬಾರ್ ಶಿರಸಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶುಕ್ರವಾರ ಮಧ್ಯಾಹ್ನ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳ ಜೊತೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದರು. ಐಸೊಲೇಷನ್ ವಾರ್ಡ್, ಕೊರೊನಾ ಶಂಕಿತರ ಕುರಿತು ಮಾಹಿತಿ ಪಡೆದುಕೊಂಡರು.
ತುರ್ತು ಚಿಕಿತ್ಸಾ ಘಟಕ, ತಾಲೂಕು ವೈದ್ಯಾಧಿಕಾರಿ ಕಚೇರಿ, ಜ್ವರದ ಪರೀಕ್ಷೆಯ ವಿಶೇಷ ಕೊಠಡಿಗಳಿಗೆ ಭೇಟಿ ನೀಡಿ ಅಗತ್ಯ ಸೇವೆಗಳನ್ನು ತುರ್ತಾಗಿ ನೀಡುವಂತೆ ಸೂಚಿಸಿದರು.