ಕಾರವಾರ : ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ಕಾರವಾರದಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಕಾರ್ಯಕರ್ತರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ನಗರ ಘಟಕದ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದ್ದು, ಇದು ಕಾರ್ಯಕರ್ತರ ಚುನಾವಣೆಯಾಗಿರುವುದಿಂದ ಎಲ್ಲರೂ ಸಕ್ರಿಯವಾಗಿ ಭಾಗವಹಿಸುವಂತೆ ಸೂಚನೆ ನೀಡಿದರು.
ಲೋಕಸಭೆ, ವಿಧಾನಸಭಾ ಚುನಾವಣೆಗಳಲ್ಲಿ ತಮ್ಮ ನಾಯಕರ ಗೆಲುವಿಗೆ ಕಾರ್ಯಕರ್ತರು ಸಾಕಷ್ಟು ಪರಿಶ್ರಮವಹಿಸಿ ಕಾರ್ಯ ನಿರ್ವಹಿಸುತ್ತಾರೆ. ಆದ್ರೆ, ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಚುನಾಯಿತ ಅಭ್ಯರ್ಥಿಗಳು ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುವುದು ಸಾಧ್ಯವಿಲ್ಲ.
ಆದ್ದರಿಂದ ಕಾರ್ಯಕರ್ತರುಗಳು ಅವರ ಪರ ಪ್ರಚಾರ ನಡೆಸಿ ಅವರ ಗೆಲುವಿಗೆ ಶ್ರಮಿಸುವಂತೆ ಶಿವರಾಮ ಹೆಬ್ಬಾರ್ ಮನವಿ ಮಾಡಿದರು. ಇದೇ ವೇಳೆ ಕಾರ್ಯಕರ್ತರು ಪಕ್ಷದ ಕಚೇರಿಗೆ ಭೇಟಿ ನೀಡಿದ ಸಚಿವರನ್ನ ಸನ್ಮಾನಿಸಿದರು.