ETV Bharat / state

ಸೀಬರ್ಡ್‌ ನೌಕಾನೆಲೆ ನಿರಾಶ್ರಿತರನ್ನು 'ರಾಷ್ಟ್ರೀಯ ಸಂತ್ರಸ್ತ'ರೆಂದು ಘೋಷಿಸುವಂತೆ ಮನವಿ - karwar

ನಿರಾಶ್ರಿತರು ಗೌರವಯುತ ಬದುಕಿಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನೂ ಹೊಂದಿ ಸಮಾಜದ ಮುಖ್ಯ ವಾಹಿನಿಯಲ್ಲಿ ಸೇರ್ಪಡೆಯಾಗುವಂತಾಗಬೇಕು. ಇದಕ್ಕಾಗಿ ನೌಕಾನೆಲೆ ನಿರಾಶ್ರಿತರನ್ನು ರಾಷ್ಟ್ರೀಯ ಸಂತ್ರಸ್ತರು ಎಂದು ಘೋಷಣೆ ಮಾಡಬೇಕು ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರಿಗೆ ಶಾಸಕಿ ರೂಪಾಲಿ ಎಸ್.ನಾಯ್ಕ ಮನವಿ ಮಾಡಿದ್ದಾರೆ.

Roopali Naik submits memorandum to minister rajanath singh
ರಕ್ಷಣಾ ಸಚಿವರಿಗೆ ಶಾಸಕಿ ರೂಪಾಲಿ ನಾಯ್ಕ ಮನವಿ
author img

By

Published : Jun 25, 2021, 12:09 PM IST

ಕಾರವಾರ: ಸೀಬರ್ಡ್ ನೌಕಾನೆಲೆ ನಿರಾಶ್ರಿತರನ್ನು ರಾಷ್ಟ್ರೀಯ ಸಂತ್ರಸ್ತರು ಎಂದು ಘೋಷಣೆ ಮಾಡಿ, ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಒದಗಿಸಲು ಶಿಪ್‌ಯಾರ್ಡ್ ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರಿಗೆ ಶಾಸಕಿ ರೂಪಾಲಿ ಎಸ್.ನಾಯ್ಕ ಮನವಿ ಮಾಡಿದ್ದಾರೆ.

ಕಾರವಾರ ಹಾಗೂ ಅಂಕೋಲಾ ಈ ಎರಡೂ ತಾಲೂಕಿನ 4,604 ಕುಟುಂಬಗಳು ನೌಕಾನೆಲೆಯಲ್ಲಿ ನಿರಾಶ್ರಿತವಾಗಿವೆ. ಈ ಕುಟುಂಬಗಳು ನಿರಾಶ್ರಿತವಾಗಿ 3 ದಶಕಗಳಾದರೂ ಸಮಾಜದಲ್ಲಿ ಗೌರವಯುತ ಬದುಕು ಕಂಡುಕೊಳ್ಳುವಲ್ಲಿ ಇದುವರೆಗೂ ಸಾಧ್ಯವಾಗಿಲ್ಲ. ಸದ್ಯ ಕೇವಲ 968 ಕುಟುಂಬಗಳಿಗೆ ಮಾತ್ರ ಉದ್ಯೋಗ ನೀಡಲಾಗಿದೆ. ನೌಕಾನೆಲೆ ನಿರಾಶ್ರಿತರು ದೇಶಕ್ಕಾಗಿ, ದೇಶದ ರಕ್ಷಣೆಗಾಗಿ ತಮ್ಮ ಮನೆ, ಭೂಮಿ ಎಲ್ಲವನ್ನೂ ತ್ಯಾಗ ಮಾಡಿದ್ದಾರೆ.

ಈ ಕಾರಣದಿಂದ ನಿರಾಶ್ರಿತರು ಉದ್ಯೋಗ, ಗೌರವಯುತ ಬದುಕಿಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನೂ ಹೊಂದಿ ಸಮಾಜದ ಮುಖ್ಯ ವಾಹಿನಿಯಲ್ಲಿ ಸೇರ್ಪಡೆಯಾಗುವಂತಾಗಬೇಕು. ಇದಕ್ಕಾಗಿ ನೌಕಾನೆಲೆ ನಿರಾಶ್ರಿತರನ್ನು ರಾಷ್ಟ್ರೀಯ ಸಂತ್ರಸ್ತರು ಎಂದು ಘೋಷಣೆ ಮಾಡಬೇಕು. 4 ಸಾವಿರಕ್ಕೂ ಹೆಚ್ಚು ನಿರಾಶ್ರಿತ ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ಕೊಡಬೇಕು. ಅವರಿಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನೂ ದೊರಕಿಸಿಕೊಡುವ ಮೂಲಕ ದೇಶಕ್ಕಾಗಿ ತ್ಯಾಗ ಮಾಡಿದವರ ಬದುಕು ಹಸನಾಗುವಂತೆ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿದರು.

ನನ್ನ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ನೌಕಾನೆಲೆ, ಕೈಗಾ ಅಣು ವಿದ್ಯುತ್ ಸ್ಥಾವರ, ಕೊಂಕಣ ರೈಲ್ವೆ, ಚತುಷ್ಪಥ ಹೆದ್ದಾರಿ, ಕದ್ರಾ, ಕೊಡಸಳ್ಳಿ ಜಲ ವಿದ್ಯುತ್ ಯೋಜನೆಗಳು ಹೀಗೆ ವಿವಿಧ ಕಾರಣಗಳಿಂದ ನಿರಾಶ್ರಿತರಾದ ಕುಟುಂಬಗಳ ಸಂಖ್ಯೆ ಹೆಚ್ಚಿದೆ. ನಿರಾಶ್ರಿತರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ದೇಶದ ರಕ್ಷಣೆಗಾಗಿ ತ್ಯಾಗ ಮಾಡಿದವರು ಹೆಮ್ಮೆಯಿಂದ ಬದುಕುವಂತಾಗಬೇಕು ಎಂದು ಮನವಿ ಮಾಡಿದ್ದಾರೆ.

ಸೀಬರ್ಡ್ ನೌಕಾನೆಲೆಯ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ನೌಕಾನೆಲೆಗೆ ಅಗತ್ಯ ಸಾಮಗ್ರಿಗಳ ತಯಾರಿಕೆಗೆ ಇಲ್ಲಿ ಯಾವುದೇ ಕೈಗಾರಿಕೆಗಳಿಲ್ಲ. ಸ್ಥಳೀಯ ಜನತೆಗೆ ಉದ್ಯೋಗ ಕೊಡುವ ಕೈಗಾರಿಕೆಗಳೂ ಇಲ್ಲಿಲ್ಲ. ಈ ಕಾರಣಕ್ಕಾಗಿ ಸರ್ಕಾರಿ ಸ್ವಾಮ್ಯದಲ್ಲಿ ರಕ್ಷಣಾ ಇಲಾಖೆ ನೌಕಾನೆಲೆಯಲ್ಲಿ ಶಿಪ್ ಯಾರ್ಡ್ ಹಾಗೂ ಪೂರಕ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಶಾಸಕರು ರಕ್ಷಣಾ ಸಚಿವರಲ್ಲಿ ವಿನಂತಿಸಿದ್ದಾರೆ.

ನೌಕಾನೆಲೆಗೆ ಅಗತ್ಯ ಇರುವ ವಸ್ತುಗಳನ್ನು ಸ್ಥಳೀಯವಾಗಿಯೇ ಉತ್ಪಾದಿಸಬಹುದು. ಕೈಗಾರಿಕೆಗಳು ಇಲ್ಲಿ ಬೆಳೆಯುವುದರಿಂದ ಸ್ಥಳೀಯರಿಗೆ ಉದ್ಯೋಗಾವಕಾಶ ದೊರೆತು ಈ ಪ್ರದೇಶದ ಆರ್ಥಿಕ ಚಟುವಟಿಕೆಗಳು ಹೆಚ್ಚಲಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಶಾಸಕಿ ರೂಪಾಲಿ ನಾಯ್ಕ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮುಂಬರುವ ವರ್ಷಗಳಲ್ಲಿ ಭಾರತೀಯ ನೌಕಾಪಡೆ ವಿಶ್ವದ ಅಗ್ರ ಮೂರು ನೌಕಾಪಡೆಗಳಲ್ಲಿ ಒಂದಾಗಲಿದೆ - ರಾಜನಾಥ್‌ ಸಿಂಗ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.