ETV Bharat / state

ಕಾರವಾರ: ಹೆಜ್ಜೇನು ದಾಳಿಯಿಂದ 50ಕ್ಕೂ ಹೆಚ್ಚು ಜನರಿಗೆ ಗಾಯ - etv bharat kannada

ದಲಿತ ಸಂಘರ್ಷ ಸಮಿತಿ ರಾಜ್ಯ ಪದಾಧಿಕಾರಿಗಳ ಅಧ್ಯಯನ ಶಿಬಿರದಲ್ಲಿ ಹೆಜ್ಜೇನು ದಾಳಿಯಿಂದ 50ಕ್ಕೂ ಹೆಚ್ಚು ಜನರಿಗೆ ಗಾಯ - ಶಾಸಕಿ ರೂಪಾಲಿ ನಾಯ್ಕ ಅವರನ್ನು ಅವಮಾನಿಸಿದ್ದಾರೆ ಎಂದು ಮಾಜಿ ಶಾಸಕ ಸತೀಶ್ ಸೈಲ್ ವಿರುದ್ಧ ಪ್ರತಿಭಟನೆ

More than 50 people injured by honey bee attack
ಕಾರವಾರ:ಹೆಜ್ಜೇನು ದಾಳಿಯಿಂದ 50ಕ್ಕೂ ಹೆಚ್ಚು ಜನರಿಗೆ ಗಾಯ
author img

By

Published : Mar 4, 2023, 5:42 PM IST

Updated : Mar 4, 2023, 7:54 PM IST

ಹೆಜ್ಜೇನು ದಾಳಿಯಿಂದ 50ಕ್ಕೂ ಹೆಚ್ಚು ಜನರಿಗೆ ಗಾಯ

ಕಾರವಾರ: ದಲಿತ ಸಂಘರ್ಷ ಸಮಿತಿ ರಾಜ್ಯ ಪದಾಧಿಕಾರಿಗಳ ಅಧ್ಯಯನ ಶಿಬಿರದಲ್ಲಿ ಹೆಜ್ಜೇನು ದಾಳಿ ನಡೆಸಿದ ಪರಿಣಾಮ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್​ನಲ್ಲಿ ನಡೆದಿದೆ. ಟಿಬೇಟಿಯನ್ ಕ್ಯಾಂಪ್ 1 ರಲ್ಲಿ ಎರಡು ದಿನಗಳ ಅಧ್ಯಯನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಶಿಬಿರಕ್ಕೆ ರಾಜ್ಯದ ನಾನಾ ಭಾಗಗಳಿಂದ ಸುಮಾರು 300ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಆದರೆ, ಇದೇ ವೇಳೆ ಹೆಜ್ಜೇನು ದಾಳಿ ಮಾಡಿದೆ. ಇನ್ನೂ ಘಟನೆಯಲ್ಲಿ ಗಾಯಗೊಂಡ ಜನರನ್ನು 108 ಆಂಬ್ಯುಲೆನ್ಸ್ ಮೂಲಕ ಮುಂಡಗೋಡ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಾಜಿ ಶಾಸಕ ಸತೀಶ್ ಸೈಲ್ ವಿರುದ್ಧ ಪ್ರತಿಭಟನೆ: ಶಾಸಕಿ ರೂಪಾಲಿ ನಾಯ್ಕ ಅವರನ್ನು ಮಾಜಿ ಶಾಸಕ ಸತೀಶ್ ಸೈಲ್ ಅವಮಾನಿಸಿದ್ದಾರೆ ಎಂದು ಆರೋಪಿಸಿ, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಘೋಷಣೆ ಕೂಗಿ ಪ್ರತಿಭಟಿಸುತ್ತಿದ್ದ ಬಿಜೆಪಿ ಮಹಿಳಾ ಕಾರ್ಯಕರ್ತೆಯರನ್ನು ಪೊಲೀಸರು ಜಿಲ್ಲಾಧಿಕಾರಿ ಕಚೇರಿಯಿಂದ ಹೊರಕ್ಕೆ ಕಳುಹಿಸಿದ ಘಟನೆ ನಡೆದಿದೆ.

ಮಾಜಿ ಶಾಸಕ ಸತೀಶ್ ಸೈಲ್ ಅವರು ಶಾಸಕಿ ರೂಪಾಲಿ ನಾಯ್ಕ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ, ಮಹಿಳೆಯರಿಗೆ ಅಗೌರವ ತೋರಿದ್ದಾರೆ ಎಂದು ಬಿಜೆಪಿ ಮಹಿಳಾ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿ, ಸೈಲ್ ವಿರುದ್ಧ ಘೋಷಣೆಗಳನ್ನ ಕೂಗಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಡಿಸಿ ಕಚೇರಿ ಎದುರು ಘೋಷಣೆಗಳನ್ನು ಕೂಗುವಂತಿಲ್ಲ ಎಂದು ಕಾರ್ಯಕರ್ತೆಯರಿಗೆ ಸೂಚಿಸಿದರೂ ಘೋಷಣೆಗಳನ್ನ ಮುಂದುವರಿಸಿದ್ದರು. ಕೊನೆಗೆ ಪೊಲೀಸರು, ಘೋಷಣೆಗಳನ್ನು ಕೂಗುವುದಿದ್ದರೆ ಡಿಸಿ ಕಚೇರಿಯ ಹೊರಕ್ಕೆ ಹೋಗಿ ಎಂದು ಗೇಟಿನ ಹೊರಕ್ಕೆ ಕಳುಹಿಸಿದ್ದಾರೆ. ಬಳಿಕ ಗೇಟಿನ ಬಳಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ಮಾಜಿ ಶಾಸಕ ಸತೀಶ್ ಸೈಲ್, ರೂಪಾಲಿ ನಾಯ್ಕ ಹಾಗೂ ಅವರ ತಂದೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಶಾಸಕಿ ಮೇಲೆ ಹಲ್ಲೆಗೆ ಯತ್ನ ನಡೆಸಿದ್ದಾರೆ ಎಂದು ಆರೋಪಿಸಿ. ಇವರ ವಿರುದ್ಧ ಕೂಡಲೇ ಕ್ರಮಕೈಗೊಳ್ಳುವಂತೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.

ಬ್ರೇಕ್ ಲೈನರ್ ಕಿಡಿಯಿಂದ ಹೊತ್ತಿ ಉರಿದ ಲಾರಿ: ಸರಕುಗಳನ್ನು ಸಾಗಣೆ ಮಾಡುತ್ತಿದ್ದ ಲಾರಿಗೆ, ಬ್ರೇಕ್ ಲೈನರ್ ಬಿಸಿಯಿಂದ ಹೊತ್ತಿದ ಕಿಡಿ ತಗುಲಿ ಹೊತ್ತಿ ಉರಿದ ಘಟನೆ ಯಲ್ಲಾಪುರ ಅರೆಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ. ತಾಲೂಕಿನ ಅರಬೈಲ್ ಘಾಟ್ ಬಳಿ ಮುಂಬೈನಿಂದ ಎರ್ನಾಕುಲಂಗೆ ಸರಕುಗಳನ್ನು ಸಾಗಿಸುತ್ತಿದ್ದ ಲಾರಿಯ ಬ್ರೇಕ್ ಲೈನರ್ ಬಿಸಿಯಾಗಿ ಅದರ ಕಿಡಿಯೊಂದು ಲಾರಿಗೆ ಹೊತ್ತಿಕೊಂಡು ಲಾರಿ ಭಾಗಶಃ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಲಾರಿ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಾರವಾರ: 89 ವರ್ಷಗಳ ಬಳಿಕ ಗೊದಮೊಟ್ಟೆ ಮರು ಸಂಶೋಧಿಸಿದ ತಂಡ

Last Updated : Mar 4, 2023, 7:54 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.