ಕಾರವಾರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬರು ತಮ್ಮ ಎರಡು ವರ್ಷದ ಕೂಸಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊನ್ನಾವರದ ಜಲವಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಲಲಿತಾ ಮಂಜುನಾಥ ನಾಯ್ಕ(28), ಮಾನಸಾ(2) ಎಂದು ಗುರುತಿಸಲಾಗಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬೇಸತ್ತಿದ್ದ ಗೃಹಿಣಿ ಮನೆಯ ಸಮೀಪದ ಬಾವಿಗೆ ಮಗುವೊಂದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ :ನಾಯಿಗಳಿಂದ ತಪ್ಪಿಸಿಕೊಳ್ಳಲು ಹೋಗಿ ಬಾವಿಗೆ ಬಿದ್ದ ಮೂವರು.. ಓರ್ವ ಬಾಲಕಿ ದುರ್ಮರಣ