ಭಟ್ಕಳ(ಉತ್ತರಕನ್ನಡ): ಮುಂದಿನ ದಿನಗಳಲ್ಲಿ ಸ್ವಂತ ಕಟ್ಟಡದಲ್ಲಿ ಬಿಜೆಪಿ ಕಾರ್ಯಾಲಯ ನಿರ್ಮಾಣ ಮಾಡುವ ಕನಸಿದ್ದು, ಶಾಸಕ ಸುನೀಲ್ ನಾಯ್ಕ ಅವರ ನೇತೃತ್ವದಲ್ಲಿ ಸ್ವಂತ ಕಾರ್ಯಾಲಯವಾಗಲಿದೆ ಎಂಬ ವಿಶ್ವಾಸವಿದೆ ಎಂದು ಸಂಸದ ಅನಂತ ಕುಮಾರ್ ಹೆಗಡೆ ಹೇಳಿದ್ದಾರೆ.
ಭಟ್ಕಳದ ಮಣ್ಕುಳಿಯಲ್ಲಿ ಬಿಜೆಪಿ ನೂತನ ಕಚೇರಿಯ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಟ್ಕಳ ತಾಲೂಕಿನಲ್ಲಿ ಶಾಸಕರು ಹಾಗೂ ಕಾರ್ಯಕರ್ತರು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಹೀಗಾಗಿ ನೂತನ ಕಚೇರಿಯ ಕಾರ್ಯಾಲಯ ಉದ್ಘಾಟನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಸ್ವಂತ ಕಟ್ಟಡದಲ್ಲಿ ಕಾರ್ಯಾಲಯ ನಿರ್ಮಾಣ ಮಾಡುವ ಕನಸಿದೆ. ಶಾಸಕ ಸುನೀಲ್ ನಾಯ್ಕ ಅವರ ನೇತೃತ್ವದಲ್ಲಿ ಸ್ವಂತ ಕಾರ್ಯಾಲಯವಾಗಲಿದೆ ಎಂಬ ವಿಶ್ವಾಸವಿದೆ ಎಂದರು.
ಇದೇ ಸಂದರ್ಭದಲ್ಲಿ ರಾಜ್ಯ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಅವರನ್ನು ಭಟ್ಕಳ ಬಿಜೆಪಿ ಘಟಕ ಹಾಗೂ ಪಕ್ಷದ ಮುಖಂಡರು ಸನ್ಮಾನಿಸಿದರು.