ETV Bharat / state

ಕಾರವಾರ: ತಮ್ಮನ ಹೆಂಡತಿ, ಮಗು ಹತ್ಯೆ.. ಅಪರಾಧಿಗೆ ಜೀವಾವಧಿ ಶಿಕ್ಷೆ - ಅಪರಾಧಿಗೆ ಜೀವಾವಧಿ ಶಿಕ್ಷೆ

ಆಸ್ತಿ ವಿಚಾರ-ತಮ್ಮನ ಹೆಂಡತಿ, ಮಗು ಹತ್ಯೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ-ಉತ್ತರ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ.

Representative image
ಪ್ರಾತಿನಿಧಿಕ ಚಿತ್ರ
author img

By

Published : Apr 30, 2023, 10:38 AM IST

ಕಾರವಾರ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮನ ಹೆಂಡತಿ ಹಾಗೂ ಮಗನನ್ನು ಹತ್ಯೆ ಮಾಡಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 5.85 ಲಕ್ಷ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಮಾಡಿದೆ. ಅಂಕೋಲಾದ ಮಠಾಕೇರಿ ವಾರ್ಡ್​ನ ಸುಬ್ರಾಯ್ ಪ್ರಭು ಶಿಕ್ಷೆಗೆ ಒಳಗಾದ ಅಪರಾಧಿ.

ಏನಿದು ಪ್ರಕರಣ: ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಸುಬ್ರಾಯ್ ತಮ್ಮ ಅಮಿತ್, ತಾಯಿ ರುಕ್ಮಿಣಿಬಾಯಿ ಹಾಗೂ ಚಿಕ್ಕಪ್ಪ ಪದ್ಮನಾಭ ಪ್ರಭುವಿನೊಂದಿಗೆ ಜಗಳ ಮಾಡಿಕೊಂಡಿದ್ದ. ಆಸ್ತಿ ಪಾಲು ಮಾಡದೇ ಇರಲು ತಮ್ಮನ ಹೆಂಡತಿ ಮೇಧಾ (ಕಾಮಾಕ್ಷಿ) ಕಾರಣ ಎಂದು ಭಾವಿಸಿ 2019ರ ಜು. 27ರಂದು ಬಂದೂಕು ಹಿಡಿದು ಆಕೆಯ ಮನೆಗೆ ಅಕ್ರಮವಾಗಿ ಪ್ರವೇಶಿಸಿದ್ದ. ಮನೆಯಲ್ಲಿ ಮೇಧಾ ತನ್ನ ಮಗ ಅನೂಜನಿಗೆ ವಿದ್ಯಾಭ್ಯಾಸ ಮಾಡಿಸುತ್ತಿದ್ದಾಗ ಬಂದೂಕಿನಿಂದ ಗುಂಡು ಹಾರಿಸಿದ್ದ. ಆ ಗುಂಡು ಮಗನ ತಲೆಯನ್ನ ಸೀಳಿ ತಾಯಿಯ ತಲೆಯ ಭಾಗಕ್ಕೆ ಹೊಕ್ಕಿತ್ತು. ಅನೂಜ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮೇಧಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಳು.

ಇದನ್ನೂ ಓದಿ: ಮಗಳ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ.. ಆರೋಪಿಗೆ ಜೀವಾವಧಿ ಶಿಕ್ಷೆ, ಮೂರು ಲಕ್ಷ ದಂಡ

ಈ ಕುರಿತು ಭಾರತೀಯ ದಂಡ ಸಂಹಿತೆ ಕಲಂ 449, 450, 302 ಮತ್ತು ಕಲಂ 3 ಮತ್ತು 25 ಭಾರತೀಯ ಆಯುಧ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಅಂದಿನ ಪಿಎಸ್‌ಐ ಶ್ರೀಧರ್ ಎಸ್.ಆರ್, ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಉತ್ತರ ಕನ್ನಡ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಡಿ. ಎಸ್. ವಿಜಯಕುಮಾರ್, ಭಾರತೀಯ ದಂಡ ಸಂಹಿತೆ ಕಲಂ 302ರ ಅಡಿಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ, 5 ಲಕ್ಷ ದಂಡ ವಿಧಿಸಿದ್ದಾರೆ. ಜತೆಗೆ, ಕಲಂ 449 ಹಾಗೂ 450ಕ್ಕೆ ತಲಾ 10 ವರ್ಷ ಜೈಲು, 40 ಸಾವಿರ ದಂಡ, ಕಲಂ 25ಕ್ಕೆ 3 ವರ್ಷ ಜೈಲು ಹಾಗೂ 5 ಸಾವಿರ ದಂಡ, ಒಟ್ಟು 5.85 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ವಕೀಲ ರಾಜೇಶ್ ಮಳಗೀಕರ ವಾದಿಸಿದರೆ, ಮೃತ ಮೇಧಾಳ ಪತಿ ಅಮಿತ್ ಪರವಾಗಿ ವಕೀಲ ನಾಗರಾಜ ನಾಯಕ ವಕಾಲತ್ತು ವಹಿಸಿ ಅಪರಾಧಿಗೆ ಶಿಕ್ಷೆ ಕೊಡಿಸುವಲ್ಲಿ ನೆರವಾದರು.

ಅಪ್ರಾಪ್ತೆಯ ಮೇಲೆ ಅತ್ಯಾಚಾರ: 16 ವರ್ಷದ ಬಾಲಕಿಯ ಮೇಲೆ ಡಿಪ್ಲೊಮಾ ವಿದ್ಯಾರ್ಥಿಯೋರ್ವ ಅತ್ಯಾಚಾರ ನಡೆಸಿರುವ ಘಟನೆ ಇತ್ತೀಚೆಗೆ ನಡೆದಿತ್ತು. ಆರೋಪಿಯನ್ನು ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ. ಆರೋಪಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನವನು. ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ ಈತ ಕಳೆದ ಜನವರಿ ತಿಂಗಳಿನಲ್ಲಿ ಅಂಕೋಲಾಕ್ಕೆ ಬಂದಿದ್ದಾಗ ಬಾಲಕಿಯನ್ನು ನದಿಬಾಗ ಬೀಚ್‌ಗೆ ಕರೆದೊಯ್ದು ಬಲವಂತವಾಗಿ ಅತ್ಯಾಚಾರ ಎಸಗಿದ್ದ ಎಂದು ದೂರು ದಾಖಲಾಗಿದೆ.

ಇದನ್ನೂ ಓದಿ: ಕಾರವಾರ: ಅಪ್ರಾಪ್ತೆಯ ಮೇಲೆ ಅತ್ಯಾಚಾರ, ವಿದ್ಯಾರ್ಥಿ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.