ETV Bharat / state

ಮುಂಡಗೋಡದಲ್ಲಿ ಹರಿದ ನೆತ್ತರು.. ಚಾಕುವಿನಿಂದ ವ್ಯಕ್ತಿಯ ಕುತ್ತಿಗೆ ಕೊಯ್ದು ಭೀಕರ ಹತ್ಯೆ! - karawara latest news

ವ್ಯಕ್ತಿಯೋರ್ವನ ತಲೆಗೆ ಹೊಡೆದು, ಚಾಕುವಿನಿಂದ ಕುತ್ತಿಗೆ ಕೊಯ್ದ ರೀತಿಯಲ್ಲಿ ಮುಂಡಗೋಡ ಪಟ್ಟಣದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಮೀಪ ಶವ ಪತ್ತೆಯಾಗಿದೆ.

karawara murder case
ಕಾರವಾರ ಕೊಲೆ ಪ್ರಕರಣ
author img

By

Published : Jul 18, 2021, 10:10 AM IST

Updated : Jul 18, 2021, 10:20 AM IST

ಕಾರವಾರ: ಚಾಕುವಿನಿಂದ ವ್ಯಕ್ತಿಯೋರ್ವನ ಕುತ್ತಿಗೆ ಕೊಯ್ದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮುಂಡಗೋಡ ಪಟ್ಟಣದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಮೀಪ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಪಟ್ಟಣದ ಕಂಬಾರಗಟ್ಟಿಯ ನಿವಾಸಿ ವಿಜಯ ಈಳಿಗೇರ (29) ಕೊಲೆಯಾದ ವ್ಯಕ್ತಿ.

ಬೈಕ್​ನಲ್ಲಿ ಬಂದಿದ್ದ ಈತನನ್ನು ಯಾರೋ ದುಷ್ಕರ್ಮಿಗಳು ಯಾವುದೋ ವಿಷಯಕ್ಕೆ ಜಗಳ ತೆಗೆದು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಆತನ ತಲೆಗೆ ಹೊಡೆದು, ಚಾಕುವಿನಿಂದ ಕುತ್ತಿಗೆ ಕೊಯ್ದ ರೀತಿಯಲ್ಲಿ ರಸ್ತೆ ಪಕ್ಕದ ಚರಂಡಿಯಲ್ಲಿ ಶವ ಪತ್ತೆಯಾಗಿದೆ. ಬೆಳಗ್ಗೆ ವಾಕಿಂಗ್ ಹೋಗುವವರು ವಿಜಯ ಕೊಲೆಯಾಗಿ ಬಿದ್ದಿರುವುದನ್ನು ಕಂಡು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಇದನ್ನೂ ಓದಿ: ಕಳ್ಳತನ ಆರೋಪ: ಅಥಣಿಯಲ್ಲಿ ಯುವಕನ ಕೈಕಾಲು ಕಟ್ಟಿ ಹಾಕಿ ಥಳಿತ

ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಈ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Jul 18, 2021, 10:20 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.