ETV Bharat / state

ಗೋಕರ್ಣದಲ್ಲಿ ಹೆಚ್ಚಿದ ಕಸದ ರಾಶಿ: ರಾಷ್ಟ್ರೀಯ ಹಸಿರು ನ್ಯಾಯ ಪೀಠದಿಂದ ನೋಟಿಸ್ - etv bharat kannada

ಐತಿಹಾಸಿಕ ಧಾರ್ಮಿಕ ಕ್ಷೇತ್ರ ಗೋಕರ್ಣ ಕಡಲತೀರದಲ್ಲಿ ಕಸದ ಸಮಸ್ಯೆ ಹೆಚ್ಚಾಗಿದ್ದು, ರಾಷ್ಟ್ರೀಯ ಹಸಿರು ನ್ಯಾಯಪೀಠ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದೆ.

national-green-tribunal-issued-notice-to-dc-and-local-administration
ರಾಷ್ಟ್ರೀಯ ಹಸಿರು ನ್ಯಾಯ ಪೀಠದಿಂದ ನೋಟಿಸ್ ಜಾರಿ
author img

By

Published : Apr 7, 2023, 8:20 PM IST

Updated : Apr 7, 2023, 10:11 PM IST

ಗೋಕರ್ಣ ಕಡಲತೀರದಲ್ಲಿ ಕಸದ ಸಮಸ್ಯೆ

ಕಾರವಾರ: ಗೋಕರ್ಣ ಕಡಲತೀರದಲ್ಲಿನ ಕಸದ ಸಮಸ್ಯೆ ಮನಗಂಡಿರುವ ರಾಷ್ಟ್ರೀಯ ಹಸಿರು ನ್ಯಾಯಪೀಠ ಸುಮೋಟೋ ಪ್ರಕರಣ ದಾಖಲಿಸಿಕೊಂಡು ಕುಮಟಾ ಪಟ್ಟಣ ಪಂಚಾಯತ್ ಹಾಗೂ ಜಿಲ್ಲಾಧಿಕಾರಿಗಳಿಗೆ ನೋಟಿಸ್ ಜಾರಿಮಾಡಿದೆ. ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಮತ್ತು ಐತಿಹಾಸಿಕ ಧಾರ್ಮಿಕ ಸ್ಥಳವಾಗಿರುವ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣಕ್ಕೆ ನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಾರೆ. ಶ್ರೀ ಕ್ಷೇತ್ರ ಕೇವಲ ಧಾರ್ಮಿಕ ತಾಣ ಮಾತ್ರವಾಗಿರದೇ, ಪ್ರವಾಸೋದ್ಯಮದ ದೃಷ್ಟಿಯಿಂದಲೂ ಇಲ್ಲಿನ ಕಡಲತೀರಗಳು ದೇಶ, ವಿದೇಶಗಳ ಪ್ರವಾಸಿಗರ ಹಾಟ್ ಫೇವರೆಟ್ ಆಗಿವೆ. ಆದರೆ ಇಂತಹ ತಾಣದಲ್ಲಿ ಎಲ್ಲೆಂದರಲ್ಲಿ ಬಿದ್ದಿರುವ ಕಸದ ರಾಶಿಯಿಂದ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದ್ದು ಈ ವಿಚಾರ ಈಗ ರಾಷ್ಟ್ರೀಯ ಹಸಿರು ನ್ಯಾಯಪೀಠದ ಕೆಂಗಣ್ಣಿಗೆ ಗುರಿಯಾಗಿದೆ.

ಶಿವನ ಆತ್ಮಲಿಂಗಲಿರುವ ಏಕೈಕ ಪುಣ್ಯಕ್ಷೇತ್ರ ಎನ್ನುವ ಖ್ಯಾತಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣಕ್ಕಿದೆ. ಪ್ರತಿನಿತ್ಯ ಸಾವಿರಾರು ಭಕ್ತರು ಹಾಗೂ ಪ್ರವಾಸಿಗರು ರಾಜ್ಯ, ಹೊರರಾಜ್ಯಗಳಿಂದ ಗೋಕರ್ಣಕ್ಕೆ ಆಗಮಿಸುತ್ತಾರೆ. ಇಲ್ಲಿನ ಕಡಲತೀರಗಳೂ ಸಹ ಪ್ರವಾಸಿಗರ ಆಕರ್ಷಣೆಯ ತಾಣವಾಗಿದ್ದು, ವಿದೇಶಿಗರೂ ಸೇರಿದಂತೆ ದೇಶದ ನಾನಾ ಭಾಗಗಳಿಂದ ಪ್ರವಾಸಿಗರ ದಂಡೇ ಹರಿದುಬರುತ್ತದೆ.

ನೋಟಿಸ್ ಜಾರಿಯಾಗಿರುವ ಬಗ್ಗೆ ಸ್ಥಳೀಯರಾದ ನಾಗರಾಜ ಹರಪ್ಪನಳ್ಳಿ ಮಾತನಾಡಿ, ಇಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಾಗಿರುವುದರ ಜೊತೆಗೆ ಅದರ ದುಷ್ಪರಿಣಾಮಗಳೂ ಸಹ ಉಂಟಾಗಿದೆ. ಹೀಗಾಗಿ ರಾಷ್ಟ್ರೀಯ ಹಸಿರು ನ್ಯಾಯಪೀಠ ಜಿಲ್ಲಾಧಿಕಾರಿ ಮತ್ತು ಸ್ಥಳೀಯ ಆಡಳಿತಕ್ಕೆ ನೋಟಿಸ್​ ನೀಡಿದೆ. ಇದರಿಂದ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ವಿಫಲವಾಗಿದೆ ಎಂದು ಸ್ಪಷ್ಟವಾಗಿದೆ ಎಂದರು.

ನಾವು ಪ್ರವಾಸಿಗರನ್ನು ಮತ್ತು ಧಾರ್ಮಿಕ ಕ್ಷೇತ್ರದ ಹೆಸರನ್ನು ಉಳಿಸಿಕೊಳ್ಳಬೇಕು. ಇಲ್ಲಿನ ಕುಡ್ಲೆ ಬೀಚ್​ಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ, ಸ್ವಚ್ಛತೆಯನ್ನು ಕಾಪಾಡಲು ಸ್ಥಳೀಯ ಆಡಳಿತ ಹಾಗೂ ಜಿಲ್ಲಾಡಳಿತ ಕಾಳಜಿ ವಹಿಸಬೇಕು. ಇಲ್ಲವಾದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಟ್ಟ ಹೆಸರು ಬರುತ್ತದೆ. ಪ್ರತಿಯೊಬ್ಬರು ತಮ್ಮ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಕಸದ ಸಮಸ್ಯೆಗೆ ಅಭಿಯಾನದ ಮಾದರಿಯಲ್ಲಿ ಸ್ಥಳೀಯರ ಸಹಕಾರದೊಂದಿಗೆ ಸ್ವಚ್ಛತೆ ಮಾಡಲು ಯೋಜನೆಯನ್ನು ರೂಪಿಸಲಾಗುತ್ತಿದೆ ಮತ್ತು ಜನರಲ್ಲಿ ಜಾಗೃತಿ ಮೂಡಿಸಿ ಅವರನ್ನು ಪ್ರವಾಸಿಗರಿಗೆ ಮಾದರಿಯಾಗುವಂತೆ ಮನ ಪರಿವರ್ತನೆ ಮಾಡಬೇಕಾಗುತ್ತದೆ ಎಂದರು.

ಇನ್ನು ಕಡಲತೀರದಲ್ಲಿ ಬಿದ್ದಿರುವ ಕಸವನ್ನು ಸ್ಥಳೀಯ ಜಾನುವಾರುಗಳು ತಿನ್ನುತ್ತಿದ್ದು, ಕಸದ ರಾಶಿಯಿಂದಾಗಿ ರೋಗ ರುಜಿನಗಳು ಹರಡುವ ಆತಂಕವನ್ನು ಸ್ಥಳೀಯ ನಿವಾಸಿಗಳು ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕಡಲತೀರಕ್ಕೆ ಗ್ರಾಮದ ಕೊಳಚೆ ನೀರು ಸಹ ಸೇರುತ್ತಿದ್ದು ಇದು ಜಲ ಮಾಲಿನ್ಯಕ್ಕೆ ದಾರಿ ಮಾಡಿಕೊಡುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿರುವ ಗೋಕರ್ಣ ಕಡಲತೀರದ ಕಸದ ಸಮಸ್ಯೆ ಹಸಿರು ನ್ಯಾಯಪೀಠದ ಗಮನ ಸೆಳೆದಿರುವುದು ಸ್ಥಳೀಯ ಆಡಳಿತಕ್ಕೆ ಚುರುಕು ಮುಟ್ಟಿಸಿದಂತಾಗಿದೆ. ಈ ಬಗ್ಗೆ ಸ್ಥಳೀಯ ಆಡಳಿತ ಅದಷ್ಟು ಬೇಗ ಎಚ್ಚೆತ್ತುಕೊಂಡು ಕಸದ ನಿರ್ವಹಣೆಯನ್ನು ಸರಿಯಾಗಿ ಮಾಡಬೇಕಾಗಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕಾರವಾರದ ಸುದ್ದಿಗಳು: ಸಿಕ್ಕ ಚಿನ್ನ ಮರಳಿಸಿದ ಯುವಕ, ಮನೆಯಲ್ಲಿ ತಲ್ವಾರ್ ಇಟ್ಟ ಆರೋಪಿ ಅರೆಸ್ಟ್​

Last Updated : Apr 7, 2023, 10:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.