ETV Bharat / state

ಭಟ್ಕಳದಲ್ಲಿ ಎನ್​ಐಎ ದಾಳಿ: ವ್ಯಕ್ತಿ ವಶಕ್ಕೆ ಪಡೆದ ಅಧಿಕಾರಿಗಳು

ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದಿದ್ದಾರೆ.

nia-team-raid-in-bhatkal
ಭಟ್ಕಳದಲ್ಲಿ ಎನ್​ಐಎ ದಾಳಿ: ವ್ಯಕ್ತಿ ವಶಕ್ಕೆ ಪಡೆದ ಅಧಿಕಾರಿಗಳು
author img

By

Published : Jul 31, 2022, 11:42 AM IST

ಭಟ್ಕಳ(ಉತ್ತರ ಕನ್ನಡ): ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್​ಐಎ) ದ ಅಧಿಕಾರಿಗಳು ಭಟ್ಕಳದಲ್ಲಿ ವ್ಯಕ್ತಿಯನ್ನು ವಶಕ್ಕೆ ಪಡೆದಿರುವ ಮಾಹಿತಿ ತಿಳಿದು ಬಂದಿದೆ. ಭಾನುವಾರ ಮುಂಜಾನೆ 4 ಗಂಟೆ ಸುಮಾರಿಗೆ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿ ಭಟ್ಕಳ ಮೂಲದ 30 ವರ್ಷದ ವ್ಯಕ್ತಿಯನ್ನು ಪಡೆದಿದ್ದಾರೆ.

ವ್ಯಕ್ತಿಯು ಐಸಿಸ್​​ ಸಂಘಟನೆಯ ಬರಹಗಳನ್ನು ಭಾಷಾಂತರ ಮಾಡುತ್ತಿದ್ದ ಎಂಬ ಶಂಕೆಯ ಮೇಲೆ ಪಡೆಯಲಾಗಿದೆ. ಅಧಿಕಾರಿಗಳು ಆತನನ್ನು ಗುಪ್ತ ಸ್ಥಳಕ್ಕೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸುತ್ತಿರುವ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಸುರತ್ಕಲ್ ಫಾಜಿಲ್ ಹತ್ಯೆ ಪ್ರಕರಣ: ಕಾರು ಮಾಲೀಕ ಪೊಲೀಸರ ವಶಕ್ಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.