ETV Bharat / state

ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಮನೋಜ ನಾಯ್ಕ ವಿಧಿವಶ - National-level kabaddi player Manoj Naik news

ಭಟ್ಕಳದ ಪರಶುರಾಮ ಸ್ಪೋರ್ಟ್ಸ್ ಕ್ಲಬ್​ನ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಮನೋಜ ನಾಯ್ಕ ಹೃದಯಾಘಾತದಿಂದ ಇಂದು ನಿಧನರಾದರು.

National-level kabaddi player Manoj Naik passes away
ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ ಮನೋಜ ನಾಯ್ಕ
author img

By

Published : Sep 21, 2021, 4:25 PM IST

Updated : Sep 21, 2021, 6:22 PM IST

ಭಟ್ಕಳ: ಭಟ್ಕಳದ ಪರಶುರಾಮ ಸ್ಪೋರ್ಟ್ಸ್ ಕ್ಲಬ್​ನ ಕಬಡ್ಡಿ ಆಟಗಾರನಾಗಿ ಸಾಕಷ್ಟು ಹೆಸರು ಸಂಪಾದಿಸಿದ್ದ ಮನೋಜ ನಾಯ್ಕ ಹೃದಯಾಘಾತದಿಂದ ನಿಧನರಾದರು.

National-level kabaddi player Manoj Naik passes away
ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ ಮನೋಜ ನಾಯ್ಕ

ಜಿಲ್ಲೆಯ ಅತ್ಯುತ್ತಮ ಕಬಡ್ಡಿ ತಂಡಗಳಲ್ಲೊಂದಾಗಿರುವ ಪರಶುರಾಮ ಭಟ್ಕಳದ ಕೀ ಪ್ಲೇಯರ್ ಆಗಿದ್ದ ಮನೋಜ ನಾಯ್ಕ ತಂಡ ಹತ್ತು ಹಲವಾರು ಟೂರ್ನಿಗಳಲ್ಲಿ ಟ್ರೋಫಿ ಗೆಲ್ಲಲು ನೆರವಾಗಿದ್ದರು.

ಕಬಡ್ಡಿ ಆಟಗಾರನ ಆಕಸ್ಮಿಕ ಅಗಲಿಕೆಗೆ ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ, ಮಾಜಿ ಶಾಸಕ ಮಂಕಾಳ ವೈದ್ಯ ಸೇರಿದಂತೆ ಹಲವು ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ಆಟದ ಜೊತೆ ಎದುರಾಳಿಯನ್ನು ಮಣಿಸುವ ತಂತ್ರಗಾರಿಕೆಯಲ್ಲಿಯೂ ಮನೋಜ ನಾಯ್ಕ ಮುಂಚೂಣಿಯಲ್ಲಿದ್ದರು. ತನ್ನ ಆಕ್ರಮಣಕಾರಿ ಆಟದ ಜೊತೆ ತಂಡವನ್ನೂ ಆಕ್ರಮಣಕಾರಿಯಾಗಿ ಮುನ್ನಡೆಸುತ್ತಿದ್ದ ನಾಯ್ಕ ಅಕಾಲಿಕ ಅಗಲಿಕೆ ಕಬಡ್ಡಿ ಆಟಗಾರರಲ್ಲಿ ಮರುಕ ಉಂಟುಮಾಡಿದೆ.

Last Updated : Sep 21, 2021, 6:22 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.