ಕಾರವಾರ: ಕರ್ನಾಟಕ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಕರ್ನಾಟಕ ಬಂದ್ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಇಲ್ಲ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಹೇಳಿದ್ದಾರೆ.
ಹೊನ್ನಾವರದಲ್ಲಿ ಒಕ್ಕಲಿಗ ಸಮುದಾಯಭವನ ಲೋಕಾರ್ಪಣೆ ವೇಳೆ ಮಾತನಾಡಿದ ಅವರು, ಸರೋಜಿನಿ ಮಹಿಷಿ ವರದಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಕರ್ನಾಟಕ ಬಂದ್ಗೆ ಕರೆ ನೀಡಿವೆ. ಆದರೆ ಯಾವುದೇ ಕಾರಣಕ್ಕೂ ನಾಳೆಯ ಬಂದ್ಗೆ ಕರವೇ ನಾರಾಯಣ ಗೌಡ ಬಣ ಬೆಂಬಲಿಸಲ್ಲ ಎಂದರು.
ಸರೋಜಿನಿ ಮಹಿಷಿ ಜಾರಿ ಮಾಡುವಂತೆ ಒತ್ತಾಯಿಸಿ ಕರವೇ 1999 ರಿಂದಲೇ ಬಂದಂತಹ ಎಲ್ಲ ಸರ್ಕಾರಗಳನ್ನು ಒತ್ತಾಯಿಸುತ್ತಿದೆ. ಮಾರ್ಚ್ 15 ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಲಕ್ಷಾಂತರ ಮಂದಿ ಸಮ್ಮುಖದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಬಳಿಕ ಮುಖ್ಯಮಂತ್ರಿ ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ಅಲ್ಲದೆ ವಿಧಾನಸೌಧಕ್ಕೂ ಮುತ್ತಿಗೆ ಹಾಕಲಿದ್ದಾರೆ ಎಂದು ಅವರು ತಿಳಿಸಿದರು.