ಭಟ್ಕಳ : ಜಿಲ್ಲೆಯಲ್ಲಿ ಇಂದು ಒಟ್ಟು ಮೂರು ಹೊಸ ಕೊರೊನಾ ಪ್ರಕರಣ ದಾಖಲಾಗಿವೆ.
ಭಟ್ಕಳದ ಮುಗ್ದಮ್ ಕಾಲೋನಿಯ 29 ವರ್ಷದ ಯುವತಿಯಲ್ಲಿ ಕೊರೊನಾ ಪತ್ತೆಯಾಗಿದೆ. ಮೇ 31ರಂದು ಆಂಧ್ರದ ವಿಜಯವಾಡದಿಂದ ಬೆಂಗಳೂರಿಗೆ ಈ ಯುವತಿ ಬಂದಿದ್ದಳು.
ಬೆಂಗಳೂರಿನ ಹೋಟೆಲ್ವೊಂದರಲ್ಲಿ ವಾಸ್ತವ್ಯ ಹೂಡಿದ್ದಳು. ಬಳಿಕ ಕುಂದಾಪುರದವರೆಗೆ ಸಾರಿಗೆ ಸಂಸ್ಥೆ ಬಸ್‌ನಲ್ಲಿ ಪ್ರಯಾಣಿಸಿ, ಭಟ್ಕಳಕ್ಕೆ ಟ್ಯಾಕ್ಸಿಯಲ್ಲಿ ಬಂದಿದ್ದ ಯುವತಿಯ ಗಂಟಲು ದ್ರವ ಪರೀಕ್ಷೆ ನಡೆಸಿ ಹೋಂ ಕ್ವಾರೆಂಟೈನಲ್ಲಿರಿಸಲಾಗಿತ್ತು.
ಇಂದು ಬಂದ ವರದಿಯಲ್ಲಿ ಯುವತಿಗೆ ಕೊರೊನಾ ಇರುವುದು ದೃಢಪಟ್ಟಿದೆ.