ಕಾರವಾರ: ಹೊನ್ನಾವರದಲ್ಲಿ ಇಂದು ಮತ್ತೊಂದು ಕೊರೊನಾ ಸೋಂಕು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ.
ಹೊನ್ನಾವರದ ಕ್ವಾರಂಟೈನ್ ಕೇಂದ್ರದಲ್ಲಿದ್ದ 44 ವರ್ಷದ ವ್ಯಕ್ತಿಗೆ ಇಂದಿನ ಹೆಲ್ತ್ ಬುಲೆಟಿನ್ನಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಮೇ 12ರಂದು ಮಹಾರಾಷ್ಟ್ರದಿಂದ ಉತ್ತರ ಕನ್ನಡ ಜಿಲ್ಲೆಗೆ ಬಂದಿದ್ದ ವ್ಯಕ್ತಿ ಹಾಗೂ ಆತನ ಕುಟುಂಬವನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಿ ಗಂಟಲು ದ್ರವದ ಪರೀಕ್ಷೆ ನಡೆಸಲಾಗಿತ್ತು. ಅದರಂತೆ ಇಂದು ಸೋಂಕು ಇರುವುದು ದೃಢವಾಗಿದೆ.
ಇದರೊಂದಿಗೆ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣ 52ಕ್ಕೆ ಏರಿಕೆಯಾಗಿದ್ದು, 12 ಮಂದಿ ಗುಣಮುಖರಾದವರು ಸೇರಿ ಜಿಲ್ಲೆಯಲ್ಲಿ 64 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಂತಾಗಿದೆ.