ETV Bharat / state

ಕಾರು-ಬಸ್ ನಡುವೆ ಭೀಕರ ಅಪಘಾತ: ಮಹಿಳೆ ಸಾವು, ಇಬ್ಬರು ಗಂಭೀರ

ಕಾರವಾರದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಬಸ್​ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

one woman dies in a car bus collide
ಕಾರು ಬಸ್ ನಡುವೆ ಭೀಕರ ಅಪಘಾತ
author img

By

Published : Jan 31, 2021, 6:17 PM IST

ಕಾರವಾರ: ಕಾರು ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಂಕೋಲಾ ತಾಲೂಕಿನ ಮಾಸ್ತಿಕಟ್ಟಾ ಬಳಿ ಇಂದು ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಅಂಕೋಲಾದಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಗದಗದಿಂದ ಕಾರವಾರಕ್ಕೆ ಆಗಮಿಸುತ್ತಿದ್ದ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಧಾರವಾಡ ಮೂಲದ ಐವರ ಪೈಕಿ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸಹಾಯಕ್ಕೆ ಆಗಮಿಸಿದ ಹೈವೇ ಪ್ಯಾಟ್ರೋಲಿಂಗ್ ಸಿಬ್ಬಂದಿ ಹಾಗೂ ಸ್ಥಳೀಯರು ತಕ್ಷಣ ಗಾಯಾಳುಗಳನ್ನು ಕಾರವಾರದ ಕ್ರಿಮ್ಸ್​​ಗೆ ಕಳುಹಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸಿಮೆಂಟ್​ ಮಿಕ್ಸರ್​ ಲಾರಿಗೆ ಡಿಕ್ಕಿ ಹೊಡೆದ ಕಾರು: ನಾಲ್ವರ ದುರ್ಮರಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.