ಕಾರವಾರ: ಉತ್ತರಕನ್ನಡ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳ ವೀಕ್ಷಣೆಗೆ ಆಗಮಿಸಿ, ಕಾರವಾರದಲ್ಲಿ ತಂಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಬೆಳಿಗ್ಗೆ ಕಡಲ ತೀರದಲ್ಲಿ ವಾಕ್ ಮಾಡಿದರು.
ಸಿದ್ದರಾಮಯ್ಯಗೆ ಮಾಜಿ ಶಾಸಕ ಸತೀಶ್ ಸೈಲ್, ಮುಖಂಡರಾದ ಶಂಭು ಶೆಟ್ಟಿ ಸೇರಿದಂತೆ ಮತ್ತಿತರರು ಸಾಥ್ ನೀಡಿದರು.
ಇಂದು ಪ್ರವಾಹದಿಂದ ಹಾನಿಗೊಳಗಾದ ಕಾರವಾರದ ಕದ್ರಾ, ಮಲ್ಲಾಪುರ ಭಾಗದಲ್ಲಿ ಪರೀಶೀಲನೆ ನಡೆಸಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಇದೇ ವೇಳೆ ಕೆಪಿಸಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
ಇದನ್ನೂ ಓದಿ: ಚಿಕ್ಕಪೇಟೆಯಲ್ಲಿ ಪೊಲೀಸ್ ಸಿಬ್ಬಂದಿ ಕೈ ಕಚ್ಚಿದ ಮಹಿಳೆ