ಕಾರವಾರ: ಅಂಕೋಲಾ ತಾಲೂಕಿನ ಬಡಗೇರಿಯಲ್ಲಿರುವ ತಮ್ಮ ನಿವಾಸದಲ್ಲಿ ವಾಸವಾಗಿರುವ ಸುಕ್ರಜ್ಜಿ, ಕೆಲ ದಿನಗಳಿಂದ ಉಸಿರಾಟದ ಸಮಸ್ಯೆಗೊಳಗಾಗಿದ್ದರು. ಈ ಬಗ್ಗೆ ಮಾಹಿತಿ ಪಡೆದ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಸುಕ್ರಜ್ಜಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ಸುಕ್ರಜ್ಜಿ ಉಸಿರಾಟದ ಸಮಸ್ಯೆಯಿಂದಾಗಿ ಬಳಲುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಉಳಿದಂತೆ ಯಾವುದೇ ಸಮಸ್ಯೆಗಳಿಲ್ಲ. ಅವರ ಆರೈಕೆ ಬಗ್ಗೆ ಹೆಚ್ಚು ಲಕ್ಷ್ಯ ವಹಿಸುವ ಸಲುವಾಗಿ ಮಾತ್ರ ತುರ್ತು ನಿಗಾ ಘಟಕದಲ್ಲಿ ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾಸ್ಪತ್ರೆ ಸರ್ಜನ್ ಶಿವಾನಂದ್ ಕುಡ್ತಲ್ಕರ್ ಸ್ಪಷ್ಟಪಡಿಸಿದ್ದಾರೆ.