ETV Bharat / state

ಪರೇಶ್​ ಮೇಸ್ತಾ ಪ್ರಕರಣ : ಬಿಜೆಪಿ ವಿರುದ್ಧ ಹಿಂದೂ ಕಾರ್ಯಕರ್ತರ ಆಕ್ರೋಶ - ಈಟಿವಿ ಭಾರತ ಕನ್ನಡ

ಪರೇಶ್​ ಮೇಸ್ತಾ ಪ್ರಕರಣ - ಕೇಸು ಹಿಂಪಡೆಯದ ಬಿಜೆಪಿ ಸರ್ಕಾರ ವಿರುದ್ಧ ಹಿಂದೂ ಕಾರ್ಯಕರ್ತರ ಆಕ್ರೋಶ

paresh-mestha-death-case-hindu-activists-protest-againt-bjp-govt
ಪರೇಶ್​ ಮೇಸ್ತಾ ಪ್ರಕರಣ : ಬಿಜೆಪಿ ವಿರುದ್ಧ ಹಿಂದೂ ಕಾರ್ಯಕರ್ತರ ಆಕ್ರೋಶ
author img

By

Published : Jan 29, 2023, 5:28 PM IST

ಪರೇಶ್​ ಮೇಸ್ತಾ ಪ್ರಕರಣ : ಬಿಜೆಪಿ ವಿರುದ್ಧ ಹಿಂದೂ ಕಾರ್ಯಕರ್ತರ ಆಕ್ರೋಶ

ಕಾರವಾರ : ಪರೇಶ್ ಮೇಸ್ತಾ ಪ್ರಕರಣ ಕಳೆದ ಚುನಾವಣೆ ವೇಳೆ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಲ್ಲಿ ನಡೆದಿದ್ದ ಪರೇಶ್ ಮೇಸ್ತ ಅನುಮಾನಾಸ್ಪದ ಸಾವು ಪ್ರಕರಣ ರಾಜಕೀಯವಾಗಿ ಬಳಸಲ್ಪಟ್ಟಿತ್ತು. ಸದ್ಯ ಗಲಭೆ ಪ್ರಕರಣ ದಾಖಲಾಗಿ ನ್ಯಾಯಾಲಯಕ್ಕೆ ಅಲೆದಾಡುತ್ತಿರುವ ಹಿಂದೂ ಕಾರ್ಯಕರ್ತರೇ ಇದೀಗ ಬಿಜೆಪಿ ಶಾಸಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ಐದು ವರ್ಷದ ಹಿಂದೆ ಜಿಲ್ಲೆಯ ಹೊನ್ನಾವರ ಪಟ್ಟಣದಲ್ಲಿ ನಡೆದಿದ್ದ ಪರೇಶ್ ಮೇಸ್ತಾ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಚುನಾವಣೆಗೆ ಇನ್ನೂ ಮೂರ್ನಾಲ್ಕು ತಿಂಗಳು ಇದ್ದ ಸಂದರ್ಭದಲ್ಲಿ ಗಲಭೆ ನಡೆದು ಪರೇಶ್​ ಮೇಸ್ತಾ ಅನುಮಾನಸ್ಪದವಾಗಿ ಮೃತಪಟ್ಟಿದ್ದರು. ಪರೇಶ್ ಮೇಸ್ತ ಪ್ರಕರಣ ಇಟ್ಟುಕೊಂಡು ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ದ ಪ್ರತಿಭಟನೆ ನಡೆಸಿದ್ದರು.

ಬಿಜೆಪಿ ವಿರುದ್ಧ ಹಿಂದೂ ಕಾರ್ಯಕರ್ತರ ಪ್ರತಿಭಟನೆ : ಇನ್ನು ಪ್ರತಿಭಟನೆ ವೇಳೆ ಗಲಭೆಗಳಾಗಿ ಹಲವು ಹಿಂದೂ ಕಾರ್ಯಕರ್ತರ ವಿರುದ್ದ ಪ್ರಕರಣಗಳೂ ದಾಖಲಾಗಿದ್ದವು. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕರಾವಳಿಯಲ್ಲಿ ಕಮಲ ಅರಳಿದ್ದು ಕಾಂಗ್ರೆಸ್ ಮುದುರಿತ್ತು. ಸದ್ಯ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದು ಅಧಿಕಾರ ಮುಗಿಸುವ ಕೊನೆಯ ಹಂತದಲ್ಲಿ ಇದ್ದರೂ ಹಿಂದೂ ಕಾರ್ಯಕರ್ತರ ಮೇಳೆ ದಾಖಲಾದ ಪ್ರಕರಣಗಳು ಇತ್ಯರ್ಥ ಆಗಿಲ್ಲ. ಈ ಹಿನ್ನಲೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅಲೆದಾಡಿದ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಹೊನ್ನಾವರ ಪಟ್ಟಣದಲ್ಲಿ ಕುಮಟಾ ಶಾಸಕ ದಿನಕರ ಶೆಟ್ಟಿ ವಿರುದ್ದ ದಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.

ಪರೇಶ್ ಮೇಸ್ತಾ ಪ್ರಕರಣ ನಡೆದು ಐದು ವರ್ಷಗಳಾಗಿದೆ. ಆದರೆ ಅಂದಿನ ಗಲಭೆ ವೇಳೆ, ಹಿಂದೂ, ಕ್ರಿಶ್ಚಿಯನ್, ಮುಸ್ಲಿಂ ಸಮುದಾಯದವರೆಲ್ಲರೂ ಇಂದು ನ್ಯಾಯಾಲಯಕ್ಕೆ ಅಲೆಯುವಂತಾಗಿದೆ. ನಮ್ಮನ್ನು ಬಿಜೆಪಿಯವರು ರಾಜಕೀಯವಾಗಿ ಬಳಸಿಕೊಂಡು ಐದು ವರ್ಷ ಅಧಿಕಾರ ಅನುಭವಿಸಿ ಇದೀಗ ಬೀದಿಗೆ ದಬ್ಬಿದ್ದಾರೆ. ಮೀನುಗಾರರು, ಕೂಲಿ ಕಾರ್ಮಿಕರು ಎಲ್ಲರೂ ಸಂಕಷ್ಟ ಅನುಭವಿಸುತ್ತಿದ್ದೇವೆ. ಶಾಸಕರಿಗೆ ಕರೆ ಮಾಡಿದರೆ ಯಾವುದೇ ಸ್ಪಂದನೆ ನೀಡುತ್ತಿಲ್ಲ ಎಂದು ಹಿಂದೂ ಪರ ಸಂಘಟನೆ ಕಾರ್ಯಕರ್ತ ಶ್ರೀರಾಮ್ ಜಾದೂಗಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

95 ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ : 2017ರಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ ಸುಮಾರು 95 ಮಂದಿ ಮೇಲೆ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಶಾಸಕ ದಿನಕರ ಶೆಟ್ಟಿ ಇದ್ದಿದ್ದರಿಂದ ಪ್ರಕರಣವು ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯಕ್ಕೆ ಹೋಗಿತ್ತು. ಸರ್ಕಾರ ಈ ಪ್ರಕರಣಗಳನ್ನು ಕೈ ಬಿಟ್ಟಿರುವುದಾಗಿ ಹೇಳಿತ್ತು. ಆದರೆ 95 ಜನ ಹಿಂದೂ ಕಾರ್ಯಕರ್ತರ ಮೇಲೆ ದಾಖಲಾಗಿರುವ ಪ್ರಕರಣ ಕೈ ಬಿಟ್ಟಿಲ್ಲ. ಈ ಹಿನ್ನೆಲೆ ಇಂದಿಗೂ ಬೆಂಗಳೂರು ನ್ಯಾಯಾಲಯಕ್ಕೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಈ ವಿಷಯ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಬಳಿ ಮಾತನಾಡಿದ್ದೇನೆ. ಎರಡನೇ ಹಂತದಲ್ಲಿ ಎಲ್ಲರ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಕೈಬಿಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಕರಾವಳಿ, ಮಲೆನಾಡಿನಲ್ಲಿ ಕೋಮು ಸೌಹಾರ್ದತೆಯ ಮರುಸ್ಥಾಪನೆಗೆ ಪ್ರತ್ಯೇಕ ಪ್ರಜಾಧ್ವನಿ ಯಾತ್ರೆ: ರಣದೀಪ್ ಸಿಂಗ್ ಸುರ್ಜೇವಾಲ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.