ಕಾರವಾರ:ಗೋವಾದ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಚಿತಾಭಸ್ಮವನ್ನು ಇಂದು ಸಾರ್ವಜನಿಕ ದರ್ಶನಕ್ಕೆ ಇಟ್ಟು ಕಾಳಿ ನದಿಯಲ್ಲಿ ವಿಸರ್ಜನೆ ಮಾಡಲಾಯಿತು.
ಚಿತಾಭಸ್ಮವನ್ನು ನಗರದ ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರು, ಸೇರಿದಂತೆ ಸಾರ್ವಜನಿಕರು ಪರಿಕ್ಕರ್ ಚಿತಾಭಸ್ಮಕ್ಕೆ ಪುಷ್ಪ ಅರ್ಪಿಸಿ ನಮಸ್ಕರಿಸಿ, ಶ್ರದ್ಧಾಂಜಲಿ ಸಲ್ಲಿಸಿದರು.
ಸಂಜೆ 4 ಗಂಟೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ, ಬಳಿಕ ಕಾಳಿ ನದಿಯಲ್ಲಿ ಚಿತಾಭಸ್ಮವನ್ನು ವಿಸರ್ಜಿಸಲಾಗಿದೆ.