ETV Bharat / state

ಹೊನ್ನಾವರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೆಂಪೊ ಪಲ್ಟಿ: ಓರ್ವ ಸಾವು, 12 ಮಂದಿಗೆ ಗಾಯ - ಟೆಂಪೊ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಟೆಂಪೊ ಪಲ್ಟಿ. ಓರ್ವ ಸಾವು, 12 ಮಂದಿಗೆ ಗಾಯ. ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69ರ ಖರ್ವಾ ತಿರುವಿನಲ್ಲಿ ಘಟನೆ.

Tempo overturned
ಟೆಂಪೊ ಪಲ್ಟಿ
author img

By

Published : Oct 11, 2022, 11:12 AM IST

Updated : Oct 11, 2022, 11:20 AM IST

ಕಾರವಾರ(ಉತ್ತರ ಕನ್ನಡ): ಚಾಲಕನ ನಿಯಂತ್ರಣ ತಪ್ಪಿ ಟೆಂಪೊ ಪಲ್ಟಿಯಾಗಿ ಓರ್ವ ಮೃತಪಟ್ಟು, 12ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69ರ ಖರ್ವಾ ತಿರುವಿನಲ್ಲಿ ಮಂಗಳವಾರ ಮುಂಜಾನೆ ಈ ಘಟನೆ ಸಂಭವಿಸಿದೆ.

ಜಲವಳ್ಳ ಕರ್ಕಿಯ ಹನುಮಂತ ರಾಮ ಪೂಜಾರಿ ಮೃತರು. ಗೇರುಸೊಪ್ಪ ಕಡೆಯಿಂದ ಹೊನ್ನಾವರಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗ ಖರ್ವಾ ಸಮೀಪ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಘಟನೆಯಲ್ಲಿ ಹನುಂಮತ ರಾಮ ಪೂಜಾರಿ ತೀವ್ರ ಗಾಯಗೊಂಡಿದ್ದರು. ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸರಳಗಿಯ ಮಹೇಶ ರಾಮಪ್ಪ ನಾಯ್ಕ ಎನ್ನುವವರಿಗೆ ತಲೆ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ರಸ್ತೆ ಅಪಘಾತ.. ಸಿಐಡಿ ಮಹಾನಿರ್ದೇಶಕ ಗೋವಿಂದ್​ ಸಿಂಗ್​​ ಪತ್ನಿ ಸಾವು

Last Updated : Oct 11, 2022, 11:20 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.