ಕಾರವಾರ: ಕರ್ತವ್ಯಕ್ಕೆ ಹಾಜರಾಗಿದ್ದ ಪೊಲೀಸ್ ಪೇದೆಯೊಬ್ಬರು ಕಚೇರಿಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರವಾರದ ಡಿಎಆರ್ನಲ್ಲಿ ನಡೆದಿದೆ.
ಹೊನ್ನಾವರದ ಹಳದೀಪುರದ ನಿವಾಸಿ ಗುರುಪ್ರಸಾದ್ ನಾಯ್ಕ್ (35) ಆತ್ಮಹತ್ಯೆಗೆ ಶರಣಾದ ಪೇದೆ ಎಂದು ತಿಳಿದು ಬಂದಿದೆ. ಮಹಿಳಾ ಕ್ಲರ್ಕ್ ಕೆಲಸಕ್ಕೆ ಆಗಮಿಸಿದ್ದ ವೇಳೆ ಘಟನೆ ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಇನ್ನು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನಾ ಗುರುಪ್ರಸಾದ್, ಗೆಳೆಯರಿಗೆ ಬಾಕಿಯಿದ್ದ ಹಣವನ್ನು ಮರು ಪಾವತಿಸಿದ್ದರು ಎನ್ನಲಾಗುತ್ತಿದೆ. ಈ ಸಂಬಂಧ ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಜರ್ಮನಿಯಿಂದ ಬೆಂಗಳೂರಿಗೆ ಬಂದ ಇಬ್ಬರಿಗೆ ಕೋವಿಡ್ ಸೋಂಕು