ಕಾರವಾರ : ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್ಗೆ ದಾಳಿ ನಡೆಸಿದ ಪೊಲೀಸರು ಓರ್ವನನ್ನು ಬಂಧಿಸಿ ಮಹಿಳೆಯನ್ನು ರಕ್ಷಿಸಿದ ಘಟನೆ ಕಾರವಾರದ ಸುಮಿತ್ರಾ ಲಾಡ್ಜ್ನಲ್ಲಿ ಇಂದು ನಡೆದಿದೆ.
ನಗರದಲ್ಲಿರುವ ಸುಮಿತ್ರಾ ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆ ದಾಳಿ ನಡೆಸಿದ ಪೊಲೀಸರು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ವೇಳೆ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.
ಕುಮಟಾ ತಾಲೂಕಿನ ಸುಭಾಷ್ ರಸ್ತೆಯ ನಿವಾಸಿ ಹೇಮಾಂಶು ನಾಯಕ್ ಬಂಧಿತ ಆರೋಪಿಯಾಗಿದ್ದಾನೆ. ಮಹಿಳೆಯನ್ನು ರಕ್ಷಣೆ ಮಾಡಿ ಸಾಂತ್ವನ ಕೇಂದ್ರಕ್ಕೆ ಒಪ್ಪಿಸಲಾಗಿದೆ.
ಲಾಡ್ಜ್ ನಡೆಸುತ್ತಿದ್ದ ಸತೀಶ್ ರಾಣೆ ಹಾಗೂ ಮಾಲೀಕ ವರ್ಣೇಕರ್ ಮೇಲೆಯೂ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ