ಶಿರಸಿ: ದಾಂಡೇಲಿಯಲ್ಲಿ ನಡೆದ ಕಳ್ಳತನ ಆರೋಪ ಅಡಿ ಖಾಸಗಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನನ್ನು ಪೋಲಿಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದರು.
ನಗರದ ಸೋರಗಾಂವಿ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ, ದೈಹಿಕ ಶಿಕ್ಷಣ ಶಿಕ್ಷಕ ಸುರೇಶ ಲಕ್ಷ್ಮಣ ಕಸಳ್ಳಿ ಎಂಬಾತನನ್ನು ಬಂಧಿಸಲಾಗಿತ್ತು. ಆರೋಪಿ ಮಾರುತಿ ನಗರದ ನಿವಾಸಿಯಾಗಿದ್ದು, ಆಜಾದ ನಗರಗಳಲ್ಲಿ ಮನೆಗಳ್ಳತನ ನಡೆಸಿದ್ದ ಎನ್ನಲಾಗಿದೆ.
ಬಂಧಿತ ಆರೋಪಿಯಿಂದ ಪೊಲೀಸರು ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ದಾಂಡೇಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.