ಭಟ್ಕಳ: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆಯೂ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡು ರಾಷ್ಟ್ರಪತಿಗಳಿಂದ ಅಂಕಿತ ಪಡೆದಿದ್ದು, ಇದನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆಯವರು ಪ್ರತಿಭಟನೆ ನಡೆಸಿದರು.
ಇಲ್ಲಿನ ತಹಶೀಲ್ದಾರ ಕಚೇರಿ ಎದುರು ಪ್ರಧಾನಿ ಮೋದಿ ಹಾಗೂ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಕೂಡಲೇ ಮಸೂದೆಯನ್ನು ಕೈಬಿಡುವಂತೆ ಒತ್ತಾಯಸಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆ ಭಾರತದ ಸಂವಿಧಾನಕ್ಕೆ ವಿರೋಧಿ ಮಸೂದೆಯಾಗಿದೆ. ದೇಶದಲ್ಲಿ ಕೇವಲ ಮುಸ್ಲಿಮರಷ್ಟೇ ಅಲ್ಲ ಎಲ್ಲಾ ನಾಗರಿಕರು, ಪ್ರಗತಿಪರರು ವಿರೋಧಿಬೇಕಿದೆ ಎಂದು ಎಸ್ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ತೌಪಿಕ್ ಬ್ಯಾರಿ ಹೇಳಿದರು. ಮಸೂದೆ ಕೈಬಿಡಬೇಕು. ಇದರ ಬಗ್ಗೆ ಜನರಿಗೆ ಅರಿವು ಮೂಡಿಸಿ ಕಾನೂನುಬದ್ಧ ಹೋರಾಟಕ್ಕೆ ಅಣಿಯಾಲಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.