ETV Bharat / state

ಶಿರಸಿ: ಪ್ರಾಂಶುಪಾಲರ ವರ್ಗಾವಣೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

author img

By ETV Bharat Karnataka Team

Published : Aug 22, 2023, 5:32 PM IST

ನೆಚ್ಚಿನ ಪ್ರಾಂಶುಪಾಲರ ವರ್ಗಾವಣೆ ವಿರೋಧಿಸಿ ಮಕ್ಕಳು ಮತ್ತು ಪೋಷಕರು ಶಿರಸಿಯಲ್ಲಿ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳ ಪ್ರತಿಭಟನೆ
ವಿದ್ಯಾರ್ಥಿಗಳ ಪ್ರತಿಭಟನೆ

ಶಿರಸಿ: ಪ್ರಾಂಶುಪಾಲರ ವರ್ಗಾವಣೆ ಖಂಡಿಸಿ ವಿದ್ಯಾರ್ಥಿಗಳು ಅನ್ನ, ನೀರು ಬಿಟ್ಟು ಬಿಸಿಲಿನಲ್ಲೇ ಕುಳಿತು ಪ್ರತಿಭಟನೆ ನಡೆಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಲ್ಲಿ ವಸತಿ ಶಾಲೆಯಲ್ಲಿ ನಡೆದಿದೆ. ಕಳೆದ 10 ವರ್ಷಗಳಿಂದ ಕಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾಂಶುಪಾಲರಾಗಿ ಕೆಲಸ ಮಾಡುತ್ತಿದ್ದ ರಾಘವೇಂದ್ರ ನಾಯ್ಕ ಅವರನ್ನು ಕಳೆದ ಎರಡು ದಿನಗಳ ಹಿಂದೆ ವರ್ಗಾವಣೆ ಮಾಡಲಾಗಿದೆ. ಅವರ ಜಾಗಕ್ಕೆ ಹೊಸದಾಗಿ ಚಂದ್ರಶೇಖರ್ ನಾಯ್ಕ ಎಂಬವರನ್ನು ನೇಮಕ ಮಾಡಲಾಗಿದೆ. ಇದನ್ನು ವಿರೋಧಿಸಿ ವಿದ್ಯಾರ್ಥಿಗಳು ವರ್ಗಾವಣೆಗೊಂಡ ಪ್ರಾಂಶುಪಾಲ ರಾಘವೇಂದ್ರ ನಾಯ್ಕ ಅವರನ್ನೇ ಮುಂದುವರೆಸಬೇಕು ಎಂದು ಆಗ್ರಹಿಸಿದ್ದಾರೆ.

ಮೊರಾರ್ಜಿ ಕಲ್ಲಿ ಶಾಲೆಯಲ್ಲಿ 6 ರಿಂದ 10ನೇ ತರಗತಿಯವರೆಗೆ 246 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ನಾಗರ ಪಂಚಮಿ ಹಬ್ಬದ ನಿಮಿತ್ತ ವಿದ್ಯಾರ್ಥಿಗಳು ತಮ್ಮ ಮನೆಗಳಿಗೆ ಹೋದಾಗ ವರ್ಗಾವಣೆ ಪ್ರಕ್ರಿಯೆ ನಡೆದಿದ್ದು, ಮಂಗಳವಾರ (ಇಂದು) ಶಾಲೆಗೆ ಬಂದಾಗ ವಿಷಯ ತಿಳಿದು ದಿಢೀರ್ ಪ್ರತಿಭಟನೆ ಕೈಗೊಂಡಿದ್ದಾರೆ.

"ಕಳೆದ ಹಲವು ವರ್ಷಗಳಿಂದ ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಉತ್ತಮವಾಗಿ ನಡೆಸಿಕೊಂಡು ಬಂದಿದ್ದಾರೆ. ಎಲ್ಲಕ್ಕಿಂತ ಮೊದಲು ತರಗತಿಗೆ ಬಂದು ಪಾಠ ಮಾಡುತ್ತಾರೆ. ವಿದ್ಯಾರ್ಥಿಗಳಿಗೆ ಹೆಚ್ಚುವರಿ ಪಾಠ ಹೇಳಿಕೊಡುತ್ತಾ, ಉತ್ತಮ ಸಂಸ್ಕಾರ ನೀಡಿದ್ದಾರೆ. ಶಾಲೆಯಲ್ಲಿ ಶಿಕ್ಷಣ ಮಾಡುವುದರೆ ಜೊತೆಗೆ ಸಂಜೆ ಸಮಯವೂ ವಿದ್ಯಾರ್ಥಿಗಳೊಂದಿಗೆ ಸೇರಿ ಕ್ರೀಡೆಗಳಲ್ಲಿ ಭಾಗವಹಿಸುತ್ತಿದ್ದರು. ಯಾವುದೇ ವಿಷಯದಲ್ಲಿ ಗೊಂದಲಗಳಿದ್ದರೆ ಅದರ ಬಗ್ಗೆ ಪಾಠಗಳನ್ನು ಮಾಡಿ ನಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದರು. ಕೇವಲ ಶಿಕ್ಷಣ ಮಾತ್ರವಲ್ಲದೆ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಖಾಳಜಿ ವಹಿಸಲು ಹೇಳಿಕೊಡುತ್ತಿದ್ದರು. ಹಾಗಾಗಿ ನೂತನವಾಗಿ ನೇಮಕಗೊಂಡಿರುವ ಪ್ರಾಂಶುಪಾಲರು ನಮಗೆ ಬೇಡ ರಾಘವೇಂದ್ರ ನಾಯ್ಕ ಸರ್​ ಅವರನ್ನೇ ಮರು ನೇಮಕ ಮಾಡಬೇಕು. ಇಲ್ಲದಿದ್ದಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತೇವೆ" ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.

"ಶಾಲಾ ಸಮಯ ಹೊರತುಪಡಿಸಿ ಇತರೆ ಸಮಯದಲ್ಲೂ ಮಕ್ಕಳಿಗೆ ಉಚಿತವಾಗಿ ಟ್ಯೂಷನ್​ ಕೂಡ ಹೇಳುತ್ತಿದ್ದರು. ಇದೀಗ ಮಕ್ಕಳು ಹಬ್ಬದ ಹಿನ್ನೆಲೆಯಲ್ಲಿ ಮನೆಗಳಿಗೆ ತೆರಳಿದಾಗ ವರ್ಗಾವಣೆ ಮಾಡಲಾಗಿದೆ. ಕೂಡಲೇ ವರ್ಗಾವಣೆ ರದ್ದುಗೊಳಿಸಬೇಕು" ಎಂದು ವಿದ್ಯಾರ್ಥಿಗಳ ಪೋಷಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ನೆಚ್ಚಿನ ಶಿಕ್ಷಕ ವರ್ಗಾವಣೆ: ಶಾಲೆಗೆ ಬೀಗ ಜಡಿದು ವಿದ್ಯಾರ್ಥಿಗಳ ಪ್ರತಿಭಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.