ಶಿರಸಿ: ಶಿರಸಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮತ್ತು ಬನವಾಸಿಯನ್ನು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿ ನಗರದಲ್ಲಿ ಶಿರಸಿ ಜಿಲ್ಲಾ ಹೋರಾಟ ಸಮಿತಿ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.
ನಗರದ ಹಳೇ ಬಸ್ ನಿಲ್ದಾಣ ವೃತ್ತದಿಂದ ಪ್ರಾರಂಭವಾದ ಮೆರವಣಿಗೆಯಲ್ಲಿ ನೂರಾರು ಜನರು ಭಾಗವಹಿಸಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ಶಿರಸಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಉಪೇಂದ್ರ ಪೈ ಮಾತನಾಡಿ, ಶಿರಸಿಯನ್ನು ಜಿಲ್ಲೆಯಾಗಿ ಆದಷ್ಟು ಬೇಗ ಮಾಡಬೇಕು. ನಮ್ಮ ಹೋರಾಟಕ್ಕೆ ಜನಪ್ರತಿನಿಧಿಗಳು ಹಾಗೂ ಸರ್ಕಾರ ಸ್ಪಂದಿಸಬೇಕು ಎಂದರು.
ನವೆಂಬರ್ 1ರಂದು ನಾವು ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸುವುದರ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಿಸಿ, ಶಿರಸಿ ಜಿಲ್ಲೆ ಬೇಡಿಕೆಯ ಹಕ್ಕೊತ್ತಾಯ ಮಾಡುತ್ತೇವೆ ಎಂದರು.