ಕಾರವಾರ: ಕಾಶ್ಮೀರದಲ್ಲಿ ಹಿಂದೂಗಳಿಗೆ ಪುನರ್ವಸತಿ ಕಲ್ಪಿಸಿ, ರೋಹಿಂಗ್ಯಾ ಮುಸ್ಲಿಂರನ್ನು ದೇಶದಿಂದ ಹೊರಗೆ ಓಡಿಸಬೇಕು ಮತ್ತು ಟಿಪ್ಪು ಎಕ್ಸ್ಪ್ರೆಸ್ ರೈಲಿನ ಹೆಸರನ್ನು ಬದಲಿಸಿ ಶ್ರೀ ಕೃಷ್ಣರಾಜ ಒಡೆಯರ್ ಎಂದು ಮರು ನಾಮಕರಣ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಕುಮಟಾ ಹಿಂದೂ ಜನಜಾಗೃತಿ ಸಮಿತಿಯಿಂದ ಪ್ರತಿಭಟನೆ ನಡೆಸಿ ತಹಶಿಲ್ದಾರ್ಗೆ ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರವು ಕಾಶ್ಮೀರದ ಹಿಂದೂಗಳಿಗೆ ಗೌರವದಿಂದ ಪುನರ್ವಸತಿ ಕಲ್ಪಿಸಬೇಕು. ಸರ್ಕಾರವು ಕಾಶ್ಮೀರದಲ್ಲಿ ಧ್ವಂಸಗೊಳಿಸುವ ಮಂದಿರಗಳನ್ನು ಪುನರುಜ್ಜೀವನಗೊಳಿಸಬೇಕು ಎಂದು ಆಗ್ರಹಿಸಿದ್ರು.
ಅಲ್ಲದೆ ಕಾಂಗ್ರೆಸ್ ಆಡಳಿತದಲ್ಲಿ ಬೆಂಗಳೂರು ಮತ್ತು ಮೈಸೂರು ನಡುವೆ ಸಂಚರಿಸುವ ರೈಲನ್ನ ವೋಲೈಕೆಯ ದೃಷ್ಟಿಯಿಂದ ಟಿಪ್ಪು ಎಕ್ಸ್ಪ್ರೆಸ್ ಎಂದು ಹೆಸರಿಡಲಾಯಿತು. ಮತಾಂಧ, ಕನ್ನಡ ವಿರೋಧಿ ಟಿಪ್ಪು ಜಯಂತಿಯನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. ಹೀಗಿರುವಾಗ ಟಿಪ್ಪು ಹೆಸರಿನಲ್ಲಿ ರೈಲು ಇರುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. ಟಿಪ್ಪು ಎಕ್ಸ್ಪ್ರೆಸ್ ರೈಲಿನ ಹೆಸರನ್ನು ಬದಲಾಯಿಸಿ ಕನ್ನಂಬಾಡಿ ಅಣೆಕಟ್ಟನ್ನು ಕಟ್ಟಿ ನಾಡಿಗೆ ನೀರು, ಬೆಳಕು ನೀಡಿದ ಶ್ರೀಕೃಷ್ಣರಾಜ ಒಡೆಯರ್ ಅವರಂತ ಮಹಾನ್ ಗಣ್ಯರ ಹೆಸರನ್ನು ಇಡಬೇಕೆಂದು ಒತ್ತಾಯಿಸಿದ್ದಾರೆ.