ಭಟ್ಕಳ: ತಾಲೂಕಿನಲ್ಲಿ ನಡೆದ ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿ ಪ್ರತಿಭಟನೆ ಶಾಂತಿಯುತವಾಗಿ ನಡೆದಿದ್ದು, ಮುಸ್ಲಿಂ ಸಂಘಟನೆಯ ಪ್ರಮುಖರು ಪೊಲೀಸರಿಗೆ ಗುಲಾಬಿ ಹೂ ನೀಡಿ ಧನ್ಯವಾದ ಸಲ್ಲಿಸಿದ್ದಾರೆ.
ಪ್ರತಿಭಟನೆ ಹಿನ್ನೆಲೆ ಭಟ್ಕಳ ತಾಲೂಕಿನಲ್ಲಿ ಎರಡು ದಿನಗಳ ಕಾಲ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಪ್ರತಿಭಟನೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ನೋಡಿಕೊಂಡಿದ್ದಾರೆ. ಹಾಗಾಗಿ ಮುಸ್ಲಿಂ ಸಂಘಟನೆಯ ಪ್ರಮುಖರು ಪೊಲೀಸರಿಗೆ ಗುಲಾಬಿ ಹೂ ನೀಡಿ, ಬಂದೋಬಸ್ತ್‍ಗೆ ಸಹಕರಿಸಿದ್ದಕ್ಕೆ ಧನ್ಯವಾದ ತಿಳಿಸಿದ್ರು.