ಶಿರಸಿ: ಕಾಲೇಜು ವಿದ್ಯಾರ್ಥಿನಿಯೋರ್ವಳು ಬಸ್ಸಿನಿಂದ ಇಳಿದು ಅರಣ್ಯ ಪ್ರದೇಶದಲ್ಲಿ ಮನೆಗೆ ಹೋಗುತ್ತಿದ್ದಾಗ ಆಕೆಯ ಮೇಲೆ ಅತ್ಯಾಚಾರಕ್ಕೆ ಪ್ರಯತ್ನಿಸಿದ ಆರೋಪಿಗೆ ಶಿರಸಿಯ ಜಿಲ್ಲಾ ಸತ್ರ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ರೂಪಾಯಿಗಳ ದಂಡ ವಿಧಿಸಿ ತೀರ್ಪು ನೀಡಿದೆ.
ಸುಭಾಸ ಲಕ್ಷ್ಮಣ ಭೋವಿ ಎಂಬಾತನೆ ನ್ಯಾಯಾಲಯದ ಶಿಕ್ಷೆಗೆ ಒಳಪಟ್ಟ ಆರೋಪಿ. ಈತ 2015ರ ಅಕ್ಟೋಬರ್ 20ರಂದು ಶಿರಸಿ ತಾಲೂಕಿನ ತಟ್ಟಿಸರ ಎಂಬಲ್ಲಿ ಬಸ್ಸಿನಿಂದ ಇಳಿದು ಮನೆಗೆ ಹೋಗುತ್ತಿದ್ದ ಯುವತಿಯ ಮೇಲೆ ಅತ್ಯಾಚಾರಕ್ಕೆ ಪ್ರಯತ್ನ ಪಟ್ಟಿದ್ದ. ಶಿರಸಿ ಗ್ರಾಮೀಣ ಠಾಣೆ ಪೊಲೀಸರು ದೂರು ದಾಖಲಿಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿತ ಸುಭಾಸನಿಗೆ ನ್ಯಾಯಾಧೀಶರಾದ ಶಾಂತ ವೀರ ಶಿವಪ್ಪನವರು ಶಿಕ್ಷೆ ಪ್ರಕಟಿಸಿದ್ದಾರೆ.