ಕಾರವಾರ: ಭಾರಿ ಗಾತ್ರದ ಹೆಬ್ಬಾವೊಂದು ತಾಲೂಕಿನ ಹಣಕೋಣ ಖಾರ್ಲ್ಯಾಂಡ್ನ ಹಳಗೆಜೂಗ ರಸ್ತೆಯಲ್ಲಿ ಕಾಣಿಸಿಕೊಂಡಿದ್ದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ರಾತ್ರಿ ಸಮಯದಲ್ಲಿ ಹಳಗೆಜೂಗ ರಸ್ತೆಯಲ್ಲಿ 12 ಅಡಿಗೂ ಹೆಚ್ಚು ಉದ್ದವಿರುವ ಹೆಬ್ಬಾವು ರಸ್ತೆ ದಾಟುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಅಷ್ಟೇ ಅಲ್ಲದೆ, ಹೆಬ್ಬಾವು ರಸ್ತೆ ದಾಟುತ್ತಿರುವುದನ್ನು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದೇ ರಸ್ತೆಯಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಪ್ರತಿನಿತ್ಯ ಸಾಕಷ್ಟು ಮಂದಿ ಪ್ರತಿನಿತ್ಯ ಸಂಚರಿಸುತ್ತಿದ್ದು, ಹೆಬ್ಬಾವು ಕಾಡಿನತ್ತ ತೆರಳಿರುವುರಿಂದ ಕೊಂಚ ನಿಟ್ಟುಸಿರು ಬಿಡುವಂತಾಗಿದೆ.
ಇದನ್ನೂ ಓದಿ: ಉತ್ತರ ಕರ್ನಾಟಕಕ್ಕೆ ಕಾಳಿ ನದಿ ನೀರು ಕೊಂಡೊಯ್ಯುವ ಪ್ರಸ್ತಾಪ: ಉತ್ತರಕನ್ನಡಿಗರಿಂದ ಆಕ್ರೋಶ