ETV Bharat / state

ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಜಲಾಶಯಗಳಿಂದ ನೀರು ಬಿಡುಗಡೆ

ಉತ್ತರ ಕನ್ನಡ ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಮಳೆ ಅಬ್ಬರಿಸುತ್ತಿದ್ದು, ಒಂದರ ಮೇಲೊಂದರಂತೆ ಅವಘಡಗಳು ಸಂಭವಿಸುತ್ತಿವೆ. ಅಲ್ಲದೇ ಜಲಾಶಯಗಳಿಂದ ನೀರು ಹೊರ ಬಿಡುತ್ತಿರುವ ಕಾರಣ ನದಿ ಪಾತ್ರದ ಜನರಲ್ಲಿ ಪ್ರವಾಹದ ಭೀತಿ ಶುರುವಾಗಿದೆ.

Rain continues in Uttara Kannada district
ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಜಲಾಶಯಗಳಿಂದ ನೀರು ಬಿಡುಗಡೆ
author img

By

Published : Jul 16, 2022, 11:18 AM IST

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊಂಚ ಬಿಡುವು ನೀಡಿದ್ದ ಮಳೆ ಮತ್ತೆ ಅಬ್ಬರಿಸಲು ಶುರುವಾಗಿದೆ. ಮಳೆಯ ಜೊತೆಗೆ ಬಿರುಗಾಳಿಯಂತೆ ಗಾಳಿ ಬೀಸುತ್ತಿರುವುದು ಸಾಕಷ್ಟು ಅವಘಡಗಳ ಸೃಷ್ಟಿಗೆ ಕಾರಣವಾಗುತ್ತಿದೆ. ಮತ್ತೊಂದೆಡೆ ಜಲಾಶಯಗಳು ಭರ್ತಿಯ ಹಂತಕ್ಕೆ ತಲುಪಿದ್ದು, ನೀರು ಹೊರ ಬಿಡಲಾಗುತ್ತಿದೆ. ಇದರಿಂದ ಗ್ರಾಮಗಳು ಜಲಾವೃತವಾಗುವ ಆತಂಕವಿದೆ.

ಭಾರಿ ಮಳೆ ಗಾಳಿಯಿಂದಾಗಿ ಸಮುದ್ರದಲ್ಲಿ ಅಲೆಗಳ ಭೋರ್ಗರೆತ ಜೋರಾಗಿದೆ. ಸಾಂಪ್ರದಾಯಿಕ ಮೀನುಗಾರರು ಕಡಲಿಗಿಳಿಯದ ಪರಿಸ್ಥಿತಿ ಎದುರಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲಿ ವ್ಯಾಪಕವಾಗಿದ್ದು, ಹಳಿಯಾಳ, ಜೋಯಿಡಾ ಭಾಗದಲ್ಲಿ ಸಾಧಾರಣ ಮಳೆಯಾಗಿದೆ.

ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಜಲಾಶಯಗಳಿಂದ ನೀರು ಬಿಡುಗಡೆ

ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು: ಶಿರಸಿ, ಬನವಾಸಿ, ಸಿದ್ದಾಪುರ ಮತ್ತು ಶಿವಮೊಗ್ಗ ಭಾಗದಲ್ಲಿ ಮಳೆ ಮುಂದುವರಿದ ಕಾರಣ ವರದಾ ನದಿ ಉಕ್ಕಿ ಹರಿಯುತ್ತಿದೆ. ಬನವಾಸಿಯ ಬಾಸಿ ಗ್ರಾಮ ಪಂಚಾಯಿತಿಯ ಮೊಗಳ್ಳಿ ಗ್ರಾಮದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಇದರಿಂದ ಅಡಕೆ, ಅನಾನಸ್ ತೋಟ, ಭತ್ತದ ಗದ್ದೆಗಳು‌ ನೀರಿನಲ್ಲಿ ಮುಳುಗಡೆಯಾಗಿವೆ. ಸುಮಾರು 400 ಎಕರೆಗೂ ಹೆಚ್ಚು ಪ್ರದೇಶಕ್ಕೆ ನೀರು ನುಗ್ಗಿ ಹಾನಿಯಾಗಿದೆ.

ಜಲಾಶಯಗಳಿಂದ ನೀರು ಬಿಡುಗಡೆ: ಮಳೆ ಹೆಚ್ಚಾದ ಕಾರಣ ಜಲಾಶಯಗಳಿಗೆ ಹರಿದು ಬರುವ ನೀರಿನ ಪ್ರಮಾಣ ಏರಿಕೆಯಾಗಿದೆ. ಈಗಾಗಲೇ ದಾಂಡೇಲಿ ತಾಲೂಕಿನ ಅಂಬಿಕಾ ನಗರದ ಬೊಮ್ಮನಹಳ್ಳಿ, ಕಾರವಾರ ತಾಲೂಕಿನ ಕದ್ರಾ, ಹೊನ್ನಾವರ ವ್ಯಾಪ್ತಿಯ ಗೇರುಸೊಪ್ಪ ಅಣೆಕಟ್ಟೆಗಳು ಭರ್ತಿಯಾಗುವ ಹಂತಕ್ಕೆ ತಲುಪಿವೆ.

ಸದ್ಯ ಅಣೆಕಟ್ಟೆಗಳ ಸುರಕ್ಷತಾ ದೃಷ್ಟಿಯಿಂದ ನಿಗದಿತ ಪ್ರಮಾಣದ ನೀರನ್ನು ಸಂಗ್ರಹಿಸಿ, ಅದಕ್ಕಿಂತ ಹೆಚ್ಚಾದ ನೀರನ್ನು ಹೊರಬಿಡಲು ಜಿಲ್ಲಾಡಳಿತ ಜಲಾಶಯಗಳ ನೋಡಲ್ ಅಧಿಕಾರಿಗಳಿಗೆ ಸೂಚಿಸಿದೆ. ಅದರಂತೆ 438.38 ಮೀ. ಗರಿಷ್ಠ ಮಟ್ಟದ ಬೊಮ್ಮನಹಳ್ಳಿ ಜಲಾಶಯ 437.43 ಮೀ.ನಷ್ಟು ಭರ್ತಿಯಾಗಿದ್ದು, ಒಟ್ಟಾರೆ 4,353 ಕ್ಯೂಸೆಕ್​​ ನೀರನ್ನ ಹೊರಬಿಡಲಾಗಿದೆ.

ಇನ್ನು 34.50 ಮೀಟರ್​ನ ಕದ್ರಾ ಜಲಾಶಯ ಶುಕ್ರವಾರ ಸಂಜೆಯವರೆಗೆ 30.40 ಮೀ.ಗೆ ಭರ್ತಿಯಾಗಿದ್ದು, 37,682 ಕ್ಯೂಸೆಕ್​​ ನೀರಿನ ಒಳಹರಿವು ಪಡೆದಿದೆ. ಹೀಗಾಗಿ 8 ಗೇಟ್​​ಗಳನ್ನು ತೆರೆದು ಒಟ್ಟು 40,331 ಕ್ಯೂಸೆಕ್​​ ನೀರನ್ನು ಹೊರಬಿಡಲಾಗಿದೆ.

ಪ್ರವಾಹದ ಆತಂಕದಲ್ಲಿ ಜನ: ಕದ್ರಾ ಜಲಾಶಯದಿಂದ ನೀರು ಹೊರಬಿಟ್ಟಿರುವುದರಿಂದ ನದಿ ಪಾತ್ರದ ಜನರಲ್ಲಿ ಆತಂಕ ಹೆಚ್ಚಾಗಿದೆ. ಸುತ್ತಲಿನ ಭೈರಾ, ಕದ್ರಾ, ಗೊಟೇಗಾಳಿ, ಕೆರವಡಿ, ಸಿದ್ದರ, ಕಿನ್ನರ, ಕುರ್ನಿಪೇಟ್ ಗ್ರಾಮಗಳ ಜನತೆ ಸ್ಥಳಾಂತರಕ್ಕೆ ಮುಂದಾಗಿದ್ದಾರೆ. ಹವಾಮಾನ ಇಲಾಖೆ ಜು.19ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯ ಕುರಿತು ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಸಾರ್ವಜನಿಕರು, ಮೀನುಗಾರರು ಹಾಗೂ ಪ್ರವಾಸಿಗರು ಇನ್ನಷ್ಟು ಎಚ್ಚರಿಕೆ ವಹಿಸಲು ಸೂಚಿಸಿದೆ.

ಹಲವು ಮನೆಗಳಿಗೆ ಹಾನಿ: ಗಾಳಿ ಸಹಿತ ಭಾರಿ ಮಳೆಗೆ ಹೊನ್ನಾವರ, ಕಾರವಾರ, ಸೇರಿದಂತೆ ಹಲವೆಡೆ ಮರಗಳು ಧರೆಗುರುಳಿದ್ದು, ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಅಲ್ಲದೇ, ಜಿಲ್ಲೆಯಲ್ಲಿ ನಿನ್ನೆ ಒಂದು ಮನೆ ಸಂಪೂರ್ಣ ಹಾನಿಯಾಗಿದ್ದು, 10 ಮನೆಗಳಿಗೆ ಭಾಗಶಃ ಮತ್ತು 54 ಮನೆಗಳಿಗೆ ಸಣ್ಣಪುಟ್ಟ ಹಾನಿಯಾಗಿದೆ.

ಕೊಚ್ಚಿ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆ: ಸಿದ್ದಾಪುರದ ತಾರೇಸರದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ತಾರೇಸರದ ಪರಮೇಶ್ವರ ಕೃಷ್ಣಪ್ಪ ಹೆಗಡೆ (62) ಅವರ ಶವ ಪತ್ತೆಯಾಗಿದೆ. ಗುರುವಾರ ಹೆಗ್ಗರಣಿಯಿಂದ ಮನೆಗೆ ತೆರಳುವಾಗ ಹಳ್ಳ ದಾಟುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಹಳ್ಳದಲ್ಲಿ ಬಿದ್ದು ಕೊಚ್ಚಿ ಹೋಗಿದ್ದರು. ಅವರ ಹುಡುಕಾಟ ನಡೆಸಲಾಗಿತ್ತಾದರೂ, ಮೃತದೇಹ ನಿನ್ನೆ(ಶುಕ್ರವಾರ) ತಾರೇಸರ ಹೊಳೆಯಲ್ಲಿ ಪತ್ತೆಯಾಗಿದೆ. ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅಯ್ಯಪ್ಪ ಬೆಟ್ಟದಲ್ಲಿ ಬಿರುಕು: 80 ಕುಟುಂಬಗಳ 221 ಜನರ ಸ್ಥಳಾಂತರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.