ETV Bharat / state

ಜುಲೈ ಅಂತ್ಯದೊಳಗೆ ಮಳೆಯಾಗುವ ಮುನ್ಸೂಚನೆ ಇದ್ದು, ರಾಜ್ಯದಲ್ಲಿ ಮೋಡ ಬಿತ್ತನೆ ಮಾಡುವ ಚಿಂತನೆ ಸದ್ಯಕ್ಕಿಲ್ಲ: ಸಚಿವ ಕೃಷ್ಣ ಬೈರೇಗೌಡ - ಮೃತ ವ್ಯಕ್ತಿಯ ಕುಟುಂಬಕ್ಕೆ 5 ಲಕ್ಷ ಪರಿಹಾರ

ಉತ್ತರಕನ್ನಡದ ಕುಮಟಾದಲ್ಲಿ ನೆರೆಪೀಡಿತ ಪ್ರದೇಶಗಳ ಪರಿಶೀಲನೆ ಹಾಗೂ ಬೆಟ್ಕುಳಿ ಗ್ರಾಮದಲ್ಲಿ ನೆರೆಗೆ ಮೃತಪಟ್ಟವರ ಕುಟುಂಬಗಳಿಗೆ ಭೇಟಿ ಮಾಡಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಾಂತ್ವನ ಹೇಳಿದರು.

Revenue Minister Krishna Byre Gowda spoke to reporters.
ಸುದ್ದಿಗಾರರೊಂದಿಗೆ ಕಂದಾಯ ಸಚಿವ ಕೃಷ್ಣೆ ಬೈರೇಗೌಡ ಮಾತನಾಡಿದರು.
author img

By

Published : Jul 8, 2023, 7:08 PM IST

Updated : Jul 8, 2023, 10:51 PM IST

ಸುದ್ದಿಗಾರರೊಂದಿಗೆ ಕಂದಾಯ ಸಚಿವ ಕೃಷ್ಣೆ ಬೈರೇಗೌಡ ಮಾತನಾಡಿದರು.

ಕಾರವಾರ: ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಿದೆ. ಜುಲೈ ಅಂತ್ಯದೊಳಗೆ ಬಹುತೇಕ ಕಡೆ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸದ್ಯಕ್ಕೆ ಮೋಡ ಬಿತ್ತನೆ ಮಾಡುವ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಉತ್ತರಕನ್ನಡದ ಕುಮಟಾದಲ್ಲಿ ನೆರೆಪೀಡಿತ ಪ್ರದೇಶಗಳ ಪರಿಶೀಲನೆ ಹಾಗೂ ಬೆಟ್ಕುಳಿ ಗ್ರಾಮದಲ್ಲಿ ನೆರೆಗೆ ಮೃತಪಟ್ಟ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿ ಮಾತನಾಡಿದ ಅವರು, ಕಾರವಾರ, ಬೆಳಗಾವಿ ಭಾಗದಲ್ಲಿ ಮಳೆಯಾಗಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ಇನ್ನೂ ಮಳೆಯಾಗಿಲ್ಲ.

ಆದರೆ, ಹವಾಮಾನ ಇಲಾಖೆ ಜುಲೈ ಅಂತ್ಯದೊಳಗೆ ಎಲ್ಲೆಡೆ ಮಳೆಯಾಗುವ ಮುನ್ಸೂಚನೆ ನೀಡಿದೆ. ಜುಲೈ 20ರ ವರೆಗೆ ನೋಡಿ, ಮಳೆಯಾಗದೇ ಇದ್ದಲ್ಲಿ ಕೇಂದ್ರ ಸರ್ಕಾರದ ಮಾನದಂಡವನ್ನು ನೋಡಿ ಮೋಡ ಬಿತ್ತನೆ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ನೆರೆ ಪಿಡೀತ ಪ್ರದೇಶದ ಜನರ ಅಹವಾಲು ಆಲಿಕೆ:ಇನ್ನು ರಾಜ್ಯದಲ್ಲಿ ಈ ವರೆಗೆ 21 ಜನ ಸಾವನ್ನಪ್ಪಿದ್ದಾರೆ. ಮಂಗಳೂರು 6, ಉಡುಪಿ 4, ಉತ್ತರಕನ್ನಡ 3 ಕೆಲವರು ಇನ್ನು ಸಿಡಿಲಿಗೆ ಸಾವನ್ನಪ್ಪಿದ್ದಾರೆ. ಐದು ಲಕ್ಷ ಪರಿಹಾರವನ್ನು ನೀಡಿದ್ದೇವೆ. ಒಟ್ಟು 47 ಕ್ಕೂ ಹೆಚ್ಚು ಜಾನುವಾರಗಳು ಸಾವನ್ನಪ್ಪಿವೆ. ಮನೆಗಳು ಕೂಡ ಸಾಕಷ್ಟು ಹಾನಿಯಾಗಿವೆ. ನೆರೆಯಲ್ಲಿ ಸಂಪೂರ್ಣ ಕುಸಿದ ಮನೆಗಳಿಗೆ 1.30 ಲಕ್ಷ ಪರಿಹಾರ ನೀಡಿದ್ದೇವೆ. ಜೊತೆಗೆ ಹೊಸ ಮನೆ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ನೆರೆ ಪಿಡೀತ ಪ್ರದೇಶಗಳಿಗೆ ಭೇಟಿ ನೀಡಿ ಜನರ ಅಹವಾಲು ಆಲಿಸಿದ್ದೇನೆ. ಜೊತೆಗೆ ಅಧಿಕಾರಿ ವರ್ಗಕ್ಕೆ ತಕ್ಷಣ ಪರಿಹಾರ ಕ್ರಮಕೈಗೊಳ್ಳಲು ಚುರುಕು ಮುಟ್ಟಿಸುವ ಕೆಲಸ ಕೂಡ ಮಾಡುತ್ತಿರುವುದಾಗಿ ಎಂದು ಮಾಹಿತಿ ನೀಡಿದರು.

ಜೈನಮುನಿ ಹತ್ಯೆ:ಆರೋಪಿಗಳ ವಿರುದ್ಧ ಕಠಿಣ ಕ್ರಮ: ಇನ್ನು ಚಿಕ್ಕೋಡಿ ಜೈನಮುನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಯಾರೇ ಆಗಿದ್ದರೂ ಕೂಡ, ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಸಮಾಜದಲ್ಲಿ ಹಲ್ಲೆ ಮಾಡುವ ಹಕ್ಕು ಯಾರಿಗೂ ಇಲ್ಲ. ತನಿಖೆ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಮಾಡುವುದಾಗಿ ಸಚಿವರು ತಿಳಿಸಿದರು.

ಮೃತ ವ್ಯಕ್ತಿಯ ಕುಟುಂಬಕ್ಕೆ 5 ಲಕ್ಷ ಪರಿಹಾರ: ಇನ್ನು ಉತ್ತರಕನ್ನಡ ಜಿಲ್ಲೆಯ ನೆರೆಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹಾಗೂ ಶಾಸಕ ದಿನಕರ ಶೆಟ್ಟಿ, ಜಿಲ್ಲಾಧಿಕಾರಿಗಳೊಂದಿಗೆ ತೆರಳಿ ಪರಿಶೀಲಿಸಿದ್ದೇನೆ. ಒಂದೇ ಕಡೆ ಹಳ್ಳದಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿದ್ದ ಇಬ್ಬರ ಮನೆಯ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ‌ ಹೇಳಿದ್ದು, ತಲಾ 5 ಲಕ್ಷ ಪರಿಹಾರ ನೀಡಲಾಗಿದೆ. ಅಲ್ಲದೇ ಅಧಿಕಾರಿಗಳಿಗೂ ಈ ಬಗ್ಗೆ ಕಟ್ಟುನಿಟ್ಟಿನ ಸೂಚನೆ ನೀಡಿ ತಕ್ಷಣ ಪರಿಹಾರ ಒದಗಿಸುವ ಕೆಲಸಕ್ಕೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಇನ್ನು ಕರಾವಳಿಯಲ್ಲಿ ಮಳೆ ಜೋರಾಗಿರುವ ಕಾರಣ ಮುಂಜಾಗೃತಾ ಕ್ರಮಕ್ಕೆ ಈಗಾಗಲೇ ಅಗತ್ಯ ಕ್ರಮ‌ಕೈಗೊಳ್ಳಲಾಗಿದೆ. ಎನ್​​ಡಿಆರ್​ಎಫ್​ ತಂಡವನ್ನು ಪ್ರಮುಖ ಸ್ಥಳಗಳಲ್ಲಿ ನಿಯೋಜನೆ ಮಾಡಿದ್ದು ಈಗಾಗಲೆ ಉಡುಪಿ ಮಂಗಳೂರಿನಲ್ಲಿ ಅದು ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ಇದನ್ನೂಓದಿ:ವಿಪಕ್ಷ ನಾಯಕನ ಆಯ್ಕೆ ವಿಳಂಬದಿಂದ ಮುಜುಗರವಾಗಿದೆ: ಎನ್ ರವಿಕುಮಾರ್

Last Updated : Jul 8, 2023, 10:51 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.