ಶಿರಸಿ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿ 6 ತಿಂಗಳ ಗರ್ಭಿಣಿಯಾಗಲು ಕಾರಣನಾದ 40 ವರ್ಷದ ವ್ಯಕ್ತಿಯನ್ನು ಶಿರಸಿಯ ಬನವಾಸಿ ಪೊಲೀಸರು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಸೊರಬದ ಬೆಟ್ಟದ ಕುರ್ಲಿಯ ಹನುಮಂತಪ್ಪ ಕೆಂಚಪ್ಪ (40) ಬಂಧಿತ. ಈತನ ವಿರುದ್ಧ ಬಾಲಕಿಯನ್ನು ಕಿಡ್ನಾಪ್ ಮಾಡಿರುವ ಬಗ್ಗೆ ದೂರು ದಾಖಲಾಗಿತ್ತು. ನಂತರ ತನಿಖೆ ಕೈಗೊಂಡ ಪೊಲೀಸರು ಜು.2 ರಂದು ಬಾಲಕಿಯನ್ನು ಪತ್ತೆ ಮಾಡಿದ್ದರು.
ಈಗ ಪೊಲೀಸರಿಗೆ ಹೇಳಿಕೆ ನೀಡಿರುವ ಬಾಲಕಿ, ಜೂ.21, 2019 ರಂದು ನನ್ನನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಎರಡು ದಿನಗಳ ನಂತರ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಅಂದಿನಿಂದ ಇಲ್ಲಿಯವರೆಗೆ ನಿರಂತರಾಗಿ ದೈಹಿಕ ಸಂಪರ್ಕ ಬೆಳೆಸಿ ನನ್ನನ್ನು 6 ತಿಂಗಳು ಗರ್ಭಿಣಿಯನ್ನಾಗಿ ಮಾಡಿದ್ದಾನೆ ಎಂದು ದೂರು ನೀಡಿದ್ದಾಳೆ.
ಬನವಾಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.