ETV Bharat / state

ಐತಿಹಾಸಿಕ ಬನವಾಸಿಯ ಮಧುಕೇಶ್ವರ ದೇವರ ನವರಥಕ್ಕೆ ಮುನ್ನುಡಿ - ಮಧುಕೇಶ್ವರ ದೇವಾಲಯ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ ಮಧುಕೇಶ್ವರ ದೇವಸ್ಥಾನದ ಮಹಾರಥದ ಮರು ನಿರ್ಮಾಣ ಕಾರ್ಯ ನಡೆಯುತ್ತಿದೆ.

ನವರಥ
ನವರಥ
author img

By

Published : Aug 23, 2022, 7:12 PM IST

ಶಿರಸಿ: ರಾಜ್ಯದಲ್ಲೇ ಪ್ರಸಿದ್ಧಿ ಹೊಂದಿರುವ 400 ವರ್ಷಗಳ ಇತಿಹಾಸವಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ ಮಧುಕೇಶ್ವರ ದೇವಸ್ಥಾನದ ಮಹಾರಥದ ಮರು ನಿರ್ಮಾಣ ಕಾರ್ಯ ನಡೆಯುತ್ತಿದೆ. ಸೋಂದೆ ಅರಸರ ಕಾಲದ ರಥವನ್ನು ಈಗ ಬದಲಿಸುವ ಕೆಲಸ ನಡೆಯುತ್ತಿದ್ದು, ಮುಂಬರುವ ಮಾರ್ಚ್​ಗೆ ಹೊಸ ರಥದ ನಿರೀಕ್ಷೆ ಭಕ್ತರಿಗಿದೆ.‌

1608 ರಲ್ಲಿ ಸೋಂದಾ ರಾಮಚಂದ್ರ ನಾಯಕ ಈ ರಥವನ್ನು ಸಿದ್ಧಪಡಿಸಿ ಮಧುಕೇಶ್ವರ ದೇವಾಲಯಕ್ಕೆ ನೀಡಿದ್ದರು. 413 ವರ್ಷಗಳಷ್ಟು ಹಳೆಯದಾದ ಈ ರಥದಲ್ಲಿಯೇ ಪ್ರತಿ ವರ್ಷ ತೇರು ನಡೆಸುತ್ತಾ ಬರಲಾಗಿತ್ತು. ಈಗ ಅದರ ಬದಲಿಗೆ ನವ ರಥ ನಿರ್ಮಾಣ ಮಾಡಲಾಗುತ್ತಿದ್ದು, ಕೋಟೇಶ್ವರದ ಕುಶಲ ಕರ್ಮಿಗಳು ರಥ ನಿರ್ಮಾಣ ಕಾರ್ಯ ಆರಂಭಿಸಿದ್ದಾರೆ. ಈಗಾಗಲೇ ರಥದ ಮೂರು ಅಚ್ಚುಗಳು, ನಾಲ್ಕು ಮುಖ್ಯ ಗಾಲಿಗಳ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದೆ.

ನವರಥ ನಿರ್ಮಾಣ ಸಮಿತಿ ಕಾರ್ಯದರ್ಶಿ ಡಿ. ಡಿ ಭಟ್ ಅವರು ಮಾತನಾಡಿದರು

ಹಲಸಿನ ಮರ ಬಳಕೆ: ರಥ ನಿರ್ಮಾಣದ ಅಗತ್ಯ ಕಟ್ಟಿಗೆಗಳನ್ನು ಸ್ಥಳೀಯರು ತಮ್ಮ ಹೊಲ, ಭೂಮಿಯಲ್ಲಿ ಬೆಳೆದದ್ದನ್ನೇ ನೀಡಿದ್ದಾರೆ. ಕರಿ ಮತ್ತಿ ಜಾತಿಯ ಮರಗಳು, ರಂಜಲು ಜಾತಿಯ ಮರಗಳು, ಹೊನ್ನೆ, ಕರಿಮತ್ತಿ, ಹೆಬ್ಬಲಸು ಜಾತಿಯ ಮರಗಳನ್ನು ಭಕ್ತರು ನೀಡಿದ್ದಾರೆ. ರಥದ ಗೊಂಬೆಗಳು ಮತ್ತು ಮಧ್ಯ ಭಾಗದ ಕೆತ್ತನೆಗಳಿಗಾಗಿ ಸಾಗುವಾನಿ, ದೇವರನ್ನು ಕೂಡಿಸುವ ಪೀಠ ಸ್ಥಾಪನೆಗೆ ಹಲಸಿನ ಮರ ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಮುಖ್ಯಮಂತ್ರಿಗಳಿಂದ ಉದ್ಘಾಟನೆ: ಇನ್ನು ನವರಥ ನಿರ್ಮಾಣಕ್ಕೆ 3 ಕೋಟಿ ರೂ. ಖರ್ಚು ಅಂದಾಜಿಸಲಾಗಿತ್ತು. ಸಚಿವ ಶಿವರಾಮ ಹೆಬ್ಬಾರ್ ಮುತುವರ್ಜಿ ವಹಿಸಿ ರಥ ನಿರ್ಮಾಣಕ್ಕೆ ಹಣ ಮಂಜೂರು ಮಾಡಲು ಅವಕಾಶ ಇಲ್ಲದಿದ್ದರೂ, ಮುಖ್ಯಮಂತ್ರಿಗಳ ಮಟ್ಟದಲ್ಲಿ ಪ್ರಯತ್ನಿಸಿ ಸರ್ಕಾರದಿಂದ 3 ಕೋಟಿ ರೂ. ಮಂಜೂರು ಮಾಡಿಸಿದ್ದಾರೆ. ಇದರ ಜೊತೆ ಸಾರ್ವಜನಿಕರೂ ಉದಾರವಾಗಿ ನೀಡಿದ ಹಣ 95 ಲಕ್ಷ ರೂ. ನಷ್ಟು ಸಂಗ್ರಹವಾಗಿದೆ. ಈ ಎಲ್ಲವನ್ನೂ ಬಳಕೆ ಮಾಡಿಕೊಂಡು ಮಾರ್ಚ್ ವೇಳೆಗೆ ರಥ ಸಿದ್ಧಪಡಿಸಿ ಮುಖ್ಯಮಂತ್ರಿಗಳಿಂದ ಉದ್ಘಾಟನೆಗೆ ಭಕ್ತರು, ಸಮಿತಿಯವರು ನಿರ್ಧರಿಸಿದ್ದಾರೆ.

ಆಕರ್ಷಣೆಯಾಗಿ ಇಡುವ ಯೋಚನೆ: ಇದಲ್ಲದೇ 400 ವರ್ಷಗಳ ಹಿಂದಿನ ರಥವನ್ನು ಸ್ವಚ್ಛಗೊಳಿಸುವ ಕೆಲಸ ನಡೆಯುತ್ತಿದೆ. ನವರಥ ನಿರ್ಮಾಣವಾದ ನಂತರ ಹಳೆಯ ರಥವನ್ನು ಪ್ರವಾಸಿಗರ ಆಕರ್ಷಣೆಯಾಗಿ ಇಡುವ ಯೋಚನೆ ಆಡಳಿತ ಮಂಡಳಿಯದ್ದಾಗಿದೆ.‌

ಓದಿ: ಅರಮನೆ ಮುಂಭಾಗದಲ್ಲಿ ಸಾವರ್ಕರ್ ರಥಯಾತ್ರೆ: ಇಲ್ಲಿದೆ ವಿಶೇಷ ಸಂದರ್ಶನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.