ETV Bharat / state

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಉ.ಕನ್ನಡದಲ್ಲಿ 2 ದಿನ ರೆಡ್ ಅಲರ್ಟ್

ಈಗಾಗಲೇ ಭಾರತೀಯ ಹವಾಮಾನ ಇಲಾಖೆ ಚಂಡಮಾರುತ ಎದುರಿಸಲು ಸಕಲ ರೀತಿಯಲ್ಲಿ ಸಿದ್ಧರಾಗಿರುವಂತೆ ತಿಳಿಸಿದ್ದು, ಮೀನುಗಾರರು ಹಾಗೂ ಸಾರ್ವಜನಿಕರು ಸಮುದ್ರದ ಕಡೆಗೆ ತೆರಳದಂತೆ ಸೂಚಿಸಲಾಗಿದೆ.

Red Alert May 15 & 16 in Uttara Kannada District
ಉತ್ತರ ಕನ್ನಡದಲ್ಲಿ ಎರಡು ದಿನ ರೆಡ್ ಅಲರ್ಟ್
author img

By

Published : May 14, 2021, 11:25 AM IST

ಕಾರವಾರ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಮೇ 15 ಮತ್ತು 16 ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಭಾರಿ ಗಾಳಿಸಹಿತ ಮಳೆಯಾಗುವ ಬಗ್ಗೆ ಮುನ್ಸೂಚನೆ ಇದ್ದು, ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಜಿಲ್ಲೆಯಲ್ಲಿ ಪ್ರತೀ ಗಂಟೆಗೆ 70-80 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಹಾಗೂ 120-200 ಮಿ.ಮೀ ಮಳೆ ಬೀಳುವ ಮುನ್ಸೂಚನೆಯಿದೆ.

ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ ಹಾಗೂ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದುಕೊಳ್ಳಬೇಕು. ಮಳೆ, ಗಾಳಿಯಿಂದ ಉಂಟಾಗುವ ಹಾನಿ ತಪ್ಪಿಸಲು ಇರುವಂತಹ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರು ತುರ್ತು ಸೇವೆಗಾಗಿ ಇಲಾಖೆಯ ದಿನದ 24 ಗಂಟೆ ಕಾರ್ಯ ನಿರ್ವಹಿಸುವ ಕಂಟ್ರೋಲ್‌ ರೂಂನ ಟೋಲ್ ಫ್ರೀ ಸಂಖ್ಯೆ: 1077 ಅಥವಾ ವಾಟ್ಸಪ್ ಸಂಖ್ಯೆ: 9483511015ಗೆ ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್‌.ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕೋವಿಡ್​​ನಿಂದ ಗುಣಮುಖ: ಕೃಷಿ ಚಟುವಟಿಕೆಯಲ್ಲಿ ತೊಡಗಿದ ಸಭಾಪತಿ ಹೊರಟ್ಟಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.